Ad Widget .

ವಿಶ್ವದ ಅತ್ಯುತ್ತಮ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಇದೆಯೇ ಸ್ಥಾನಮಾನ ?

ಸಮಗ್ರ ನ್ಯೂಸ್: ಮೀಡಿಯಾ ಕಂಪನಿ ಬ್ಲೂಮ್‌ಬರ್ಗ್‌ ನಡೆಸಿದ ಸಮೀಕ್ಷೆಯಲ್ಲಿ ವಿಶ್ವದ ಆರು ಅತ್ಯುತ್ತಮ ನಗರಗಳಲ್ಲಿ ರಾಜಧಾನಿ ಬೆಂಗಳೂರು ಕೂಡ ಒಂದಾಗಿದೆ.

Ad Widget . Ad Widget .

ಬೆಂಗಳೂರಿಗೆ ಭಾರತದ ನವೋದ್ಯಮಗಳ ರಾಜಧಾನಿ ಎಂಬ ಹಿರಿಮೆ ಇದೆ. ಒಂದು ಅಂದಾಜಿನ ಪ್ರಕಾರ ಲಂಡನ್‌ ಅಥವಾ ಸ್ಯಾನ್‌ ಫ್ರಾನ್ಸಿಸ್ಕೊಗೆ ಹೋಲಿಸಿದರೆ ಬಂಡವಾಳವು ಬೆಂಗಳೂರಿನತ್ತ ವೇಗವಾಗಿ ಹರಿದುಬರುತ್ತಿದೆ.

Ad Widget . Ad Widget .

ಹೆಚ್ಚಿನ ಸಂಬಳದ ಉದ್ಯೋಗಗಳು ಮತ್ತು ಕೈಗೆಟುಕುವ ಐಷಾರಾಮಿ ಜೀವನ ಶೈಲಿಯಿಂದ ಜಾಗತಿಕ ಸಮುದಾಯಕ್ಕೆ ಬೆಂಗಳೂರು ನೆಚ್ಚಿನ ನಗರಿಯಾಗಿದೆ. ಭದ್ರತೆಯ ಕಾರಣದಿಂದ ಬೆಂಗಳೂರು ಇಷ್ಟ ಎನ್ನುವ ಅಭಿಪ್ರಾಯವನ್ನು ಬಹುತೇಕ ಜನರು ವ್ಯಕ್ತಪಡಿಸಿದ್ದಾರೆ.

ಇದರ ಜತೆಗೆ ಕೌಲಾಲಂಪುರ, ಲಿಸ್ಬನ್‌, ದುಬೈ, ಮೆಕ್ಸಿಕೋ ಸಿಟಿ ಮತ್ತು ರಿಯೊ ಡಿ ಜನೈರೊ ನಗರಗಳು ಕೂಡ ವಿಕಸನಶೀಲವಾಗುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Leave a Comment

Your email address will not be published. Required fields are marked *