ಹಿರಿಯ ಪತ್ರಕರ್ತ, ಸಾಹಿತಿ ಉದಯ ಧರ್ಮಸ್ಥಳ ಇನ್ನಿಲ್ಲ

ಸಮಗ್ರ ನ್ಯೂಸ್: ಹಿರಿಯ ಪತ್ರಕರ್ತ, ಸಾಹಿತಿ ಉದಯ ಧರ್ಮಸ್ಥಳ (64) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.

Ad Widget ... ..

ಮೂಲತಃ ಧರ್ಮಸ್ಥಳದವರಾದ ಅವರು ಬೆಂಗಳೂರಿನ ಮಾರತಹಳ್ಳಿಯಲ್ಲಿ ನೆಲೆಸಿದ್ದರು. ಸನಾತನ ಸಾರಥಿ ಪತ್ರಿಕೆಯ ಸಂಪಾದಕರಾಗಿದ್ದ ಅವರು ಧಾರ್ಮಿಕ ವಿಚಾರಗಳಿಗೆ ಸಂಬಂಧಿಸಿದ ಸಾಹಿತ್ಯ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು.

Ad Widget

ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ತುಳುವನ್ನು ಸಂವಿಧಾನದ 8ನೇ ಪರಿಚ್ಚೇದಕ್ಕೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿದ ಹೋರಾಟದಲ್ಲೂ ಸಕ್ರಿಯರಾಗಿದ್ದರು. ಉದಯ್ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *