Ad Widget .

ತಂದೆಯ ಜನ್ಮದಿನದಂದು ಈ ಭಾವನಾತ್ಮಕ ಸಾಲುಗಳನ್ನು ಬರೆದು ರಾಹುಲ್ ಗಾಂಧಿ ಸ್ಮರಿಸಿದ್ದು ಹೀಗೆ

ಇಂದು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 78ನೇ ಜನ್ಮದಿನ. ಈ ವಿಶೇಷ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯಲ್ಲಿರುವ ಅವರ ಸ್ಮಾರಕ ಸ್ಥಳ ವೀರಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Ad Widget . Ad Widget .

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತಮ್ಮ ತಂದೆಯ ಜನ್ಮದಿನದಂದು ಅವರನ್ನು ನೆನೆದು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಭಾವನಾತ್ಮಕ ವಿಡಿಯೋ ಹಂಚಿಕೊಂಡಿದ್ದಾರೆ.

Ad Widget . Ad Widget .

ಅಪ್ಪಾ, ನೀವು ಪ್ರತಿ‌ಕ್ಷಣವೂ ನನ್ನೊಂದಿಗಿದ್ದೀರಿ, ನನ್ನ ಹೃದಯದಲ್ಲಿ ನೆಲೆಸಿದ್ದೀರಿ. ಈ‌ ದೇಶಕ್ಕಾಗಿ ನೀವು ಕಂಡ ಕನಸನ್ನು ಸಾಕಾರಗೊಳಿಸಲು ನಾನು ನಿರಂತರವಾಗಿ ಪ್ರಯತ್ನಿಸುತ್ತೇನೆ’ ಎಂದು ರಾಹುಲ್ ಬರೆದುಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ರಾಹುಲ್ ತಮ್ಮ ಬಾಲ್ಯದ ನೆನಪುಗಳನ್ನು ಮೆಲಕು ಹಾಕಲು ಪ್ರಯತ್ನಿಸಿದ್ದಾರೆ. ಅದೇ ರೀತಿ ಕಾಂಗ್ರೆಸ್ ಪಕ್ಷದ ನಾಯಕರು ದೇಶದಾದ್ಯಂತ ಶನಿವಾರ ತಮ್ಮ ನಾಯಕನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸಹ ಟ್ವೀಟ್ ಮಾಡಿದ್ದು, ‘ಭಾರತದ ಅತಿ ಕಿರಿಯ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಡಿಜಿಟಲ್ ಇಂಡಿಯಾದ ನಿರ್ಮಾತೃ. ದೇಶಕ್ಕೆ ಕಂಪ್ಯೂಟರ್ ಪರಿಚಯಿಸಿದವರು, ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿ ತಂದು ಜನಸಾಮಾನ್ಯರಿಗೆ ಎಟುಕುವಂತೆ ಮಾಡಿದವರು. ದೇಶಕ್ಕಾಗಿ ಪ್ರಾಣ ಸಮರ್ಪಿಸಿದ ರಾಜೀವ್ ಗಾಂಧಿಯವರ ಜನದಿನದಂದು ಅವರಿಗೆ ನಮ್ಮ ಗೌರವಪೂರ್ವಕ ನಮನಗಳು’ ಎಂದು ನೆನಪಿಸಿಕೊಂಡಿದೆ

Leave a Comment

Your email address will not be published. Required fields are marked *