ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಂಗ್ ರೇಪ್| ಯುವತಿಯ ವೇಶ್ಯಾವಾಟಿಕೆಗೆ ತಳ್ಳಿದ ಪ್ರಿಯಕರ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ದಾಖಲಾಗಿದೆ. ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget ... ..

ಕಳೆದ 3 ವರ್ಷಗಳ ಹಿಂದೆ ಮಂಡ್ಯ ಮೂಲದ ಯುವತಿಯನ್ನು ಪ್ರಿಯಕರನೇ ಬೆಂಗಳೂರಿಗೆ ಕರೆತಂದು ವೇಶ್ಯಾವಾಟಿಕೆ ಜಾಲಕ್ಕೆ ನೂಕಿದ್ದಾನೆ. ಕೆಲಸ ಕೊಡಿಸುವುದಾಗಿ ನಂಬಿಸಿ, ಮಂಜುಳಾ ಎಂಬ ಮಹಿಳೆಯ ಸಂಪರ್ಕಕ್ಕೆ ಪ್ರಿಯಕರ ಬಿಟ್ಟಿದ್ದ. ಈ ವೇಳೆ ಮಂಜುಳಾ, ಯುವತಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ತಳ್ಳಿದ್ದಾಳೆ. ಮಾತ್ರವಲ್ಲದೇ ಆಕೆಯ ಮೇಲೆ ಹಲವರು ಏಕಕಾಲಕ್ಕೆ ದೌರ್ಜನ್ಯ ಎಸಗಿರುವುದಾಗಿ ಸಂತ್ರಸ್ತ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

Ad Widget

ವೇಶ್ಯಾವಾಟಿಕೆಗೆ ಶಿವಾನಂದ ಸರ್ಕಲ್ ಬಳಿ ಇರುವ ಸಾಯಿ ಲಾಡ್ಜ್ ಮಾಲೀಕ ಸಂತೋಷ್ ಕೂಡಾ ಬೆಂಬಲ ನೀಡುತ್ತಿದ್ದು, ಆತ ದಂಧೆಗೆ ಗ್ರಾಹಕರನ್ನು ಹೋಟೆಲ್‌ಗೆ ಕಳುಹಿಸುತ್ತಿದ್ದ ಎನ್ನಲಾಗಿದೆ.

ಈ ಬಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧ ಮಂಜುಳಾ, ಬ್ರಹ್ಮೇಂದ್ರ ಹಾಗೂ ಲಾಡ್ಜ್ ಮಾಲೀಕ ಸಂತೋಷ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *