Ad Widget .

ರಸ್ತೆ ಅಪಘಾತದಲ್ಲಿ ಕಾಲೇಜಿನ ಪ್ರಾಂಶುಪಾಲ ಸಾವು

ಚಿಂತಾಮಣಿ: ನಗರದ ಚೇಳೂರು ವೃತ್ತದ ಬಳಿ ಶನಿವಾರ ಬೆಳಿಗ್ಗೆ ಕ್ಯಾಂಟರ್ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದು, ದ್ವಿಚಕ್ರವಾಹನ ಸವಾರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Ad Widget . Ad Widget . Ad Widget . Ad Widget .

ಇಲ್ಲಿನ ಚೇಳೂರು ರಸ್ತೆಯಲ್ಲಿರುವ ಲಕ್ಷ್ಮೀ ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅಶೋಕರೆಡ್ಡಿ(40) ಮೃತರು.

Ad Widget . Ad Widget .

ಚೇಳೂರು ವೃತ್ತದ ಸಮೀಪದಲ್ಲಿ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅಶೋಕರೆಡ್ಡಿ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಯಿತು.

ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ರವಾನಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಗರಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎರಡು ವಾಹನಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *