ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ

ಸಮಗ್ರ ನ್ಯೂಸ್:ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮುಂಗಾರು ಮಳೆ ಆರ್ಭಟ ಮತ್ತೆ ಮುಂದುವರೆಯುವ ಸಾಧ್ಯತೆ ಇದೆ. ಭಾನುವಾರ ಮತ್ತು ಸೋಮವಾರ ಸಾಧಾರಣ ಮಳೆಯಾಗಲಿದ್ದು, ಆಗಸ್ಟ್ 23, 24 ರ ಮಂಗಳವಾರ, ಬುಧವಾರ ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Ad Widget ... ..

ಭಾನುವಾರ ಮತ್ತು ಸೋಮವಾರ ರಾಜ್ಯಾದ್ಯಂತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆ. 23 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Ad Widget

ಆಗಸ್ಟ್ 24 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಮೈಸೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ರಾಮನಗರ, ಚಾಮರಾಜನಗರ, ಕೋಲಾರ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Leave a Comment

Your email address will not be published. Required fields are marked *