Ad Widget .

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ಮೂವರು ಸಾವು

ತುಮಕೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆಯೊಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

Ad Widget . Ad Widget .

ಕಾರಿನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 28 ವರ್ಷದ ಅವಿನಾಶ್, 5 ವರ್ಷದ ಪ್ರಣಂತಿ, 3 ವರ್ಷದ ಸೌಖ್ಯಾ ಮೃತ ದುರ್ದೈವಿಗಳಾಗಿದ್ದಾರೆ.

Ad Widget . Ad Widget .

ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಾಳು ಬಾಲಕಿಯನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಈ ಬಗ್ಗೆ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Comment

Your email address will not be published. Required fields are marked *