ಮಳೆಯ ಅರ್ಭಟಕ್ಕೆ ಕಡಲಿನಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನೀರಿಗೆ ಇಳಿಯದಂತೆ ಮಂಗಳೂರು ಬೀಚ್ ಅಭಿವೃದ್ಧಿ ಸಮಿತಿ ಎಚ್ಚರಿಕೆ ನೀಡಿದೆ. ದೂರದಿಂದಲೆ ಸಮುದ್ರವನ್ನು ವೀಕ್ಷಣೆ ಮಾಡಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ.
ಜಿಲ್ಲಾಡಳಿತ ಪ್ರತೀ ವರ್ಷದಂತೆ ಮೇ 15ರಿಂದ ಸೆ.15ರ ವರಗೆ ಯಾವುದೇ ಜಲಸಾಹಸ ಕ್ರೀಡೆಗಳಿಗೆ ನಿಷೇಧ ಹೇರುತ್ತದೆ. ಈ ಸಮಯದಲ್ಲಿ ಯಾವುದೇ ವಾಟರ್ ಸ್ಪೋರ್ಟ್ಸ್ ನಡೆಸಲು ಅನುಮತಿ ಇರುವುದಿಲ್ಲ. ಹೀಗಾಗಿ ಪ್ರವಾಸಿಗರಿಗೆ ದೂರದಿಂದಲೇ ಬೀಚ್ ನೋಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಮುಂದೆ ಸಮುದ್ರದ ನೀರಿನ ಒತ್ತಡವನ್ನು ನೋಡಿಕೊಂಡು ನೀರಿಗಿಳಿಯಲು ಬಿಡಲಾಗುವುದು ಎಂದು ಬೀಚ್ ನಿರ್ವಾಹಕ ಸುದೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.
ಕಡಲತೀರದಲ್ಲಿ ಇದೀಗ ಮಳೆಗಾಲದಲ್ಲೂ ವಾರಾಂತ್ಯದಲ್ಲಿ ಜನಸಂದಣಿ ಕಂಡು ಬರುತ್ತಿದ್ದು ಬೀಚ್ ಅಭಿವೃದ್ಧಿ ಸಮಿತಿ ಮಾತ್ರ ಯಾರನ್ನೂ ನೀರಿಗೆ ಇಳಿಯದಂತೆ ಎಚ್ಚರ ವಹಿಸುತ್ತಿದೆ. ಹಾಗಾಗಿ ಬಂದ ಪ್ರವಾಸಿಗರು ದೂರದಲ್ಲೇ ತೃಪ್ತಿ ಪಟ್ಟುಕೊಳ್ಳುವಂತಾಗಿದೆ.
ಮೂಲಗಳ ಪ್ರಕಾರ ಸೆ. 10ರ ವರೆಗೆ ಈ ನಿರ್ಭಂಧ ಮುಂದುವರಿಯುವ ಸಾಧ್ಯತೆ ಇದೆ. ಮುಂದೆ ಸಮುದ್ರದ ನೀರಿನ ಒತ್ತಡವನ್ನು ನೋಡಿಕೊಂಡು ನೀರಿಗಿಳಿಯಲು ಬಿಡಲಾಗುವುದು ಎಂದು ಬೀಚ್ ನಿರ್ವಾಹಕ ಸುದೇಶ್ ಶೆಟ್ಟಿ ಅವರು ತಿಳಿಸಿದ್ದಾರೆ.