Ad Widget .

ಡ್ರಾಮ ಜೂನಿಯರ್ ಸೀಸನ್ 4ರ ವಿಜೇತೆ ಸಮೃದ್ಧಿ ಎಸ್ ಮೊಗವೀರ್

ಬೆಂಗಳೂರು: ಜೀ ಕನ್ನಡ ವಾಹಿನಿಯ ಡ್ರಾಮ ಜೂನಿಯರ್ ಸೀಸನ್ 4ರ ವಿಜೇತರಾಗಿ ಕುಂದಾಪುರದ ಸಮೃದ್ಧಿ ಎಸ್ ಮೊಗವೀರ್ ರವರು ಹೊರಹೊಮ್ಮಿದ್ದಾರೆ.

Ad Widget . Ad Widget .

ತಮ್ಮ ಅದ್ಭುತ ಅಭಿನಯದ ಮೂಲಕ ಮನಸೂರೆಗೊಂಡಿದ್ದ 15 ಮಕ್ಕಳು ಫೈನಲ್ ಗೆ ಆಯ್ಕೆಯಾಗಿದಿದ್ದು ವಿಶೇಷವಾಗಿತ್ತು.

Ad Widget . Ad Widget .

ಅವರಲ್ಲಿ ನಾಲ್ಕು ಮಕ್ಕಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು ತ್ರಿವಳಿ ರತ್ನಗಳು ಉತ್ತಮರಲ್ಲಿ ಅತ್ಯುತ್ತಮರನ್ನು ವಿಜೇತರನ್ನಾಗಿ ಘೋಷಿಸಿದ್ದಾರೆ.

ಅಷ್ಟೇ ಅಲ್ಲದೆ ಪ್ರತಿಯೊಬ್ಬ ಮಗುವಿಗೂ ಪದಕ ನೀಡುವ ಮೂಲಕ ಉಳಿದ 11 ಪ್ರತಿಭೆಗಳನ್ನು ಗೌರವಿಸಲಾಯಿತು.

ಕಾರ್ಯಕ್ರಮದ ಗುಣಮಟ್ಟ ಹಾಗು ವಿಶೇಷತೆಗೆ ಸಾಕ್ಷಿಯಂತೆ ಇಬ್ಬರು ಪ್ರತಿಭೆಗಳು ಚಾಮರಾಜನಗರದ ಗೌತಮ್ ರಾಜ್ ಮತ್ತು ಉಡುಪಿಯ ಸಾನಿಧ್ಯ ಆಚಾರ್ ಸಮಬಲ ಸಾಧಿಸಿಕೊಂಡು ಎರಡನೇ ಸ್ಥಾನ ಪಡೆದಿದ್ದಾರೆ ಹಾಗು ತಲಾ ಮೂರು ಲಕ್ಷ ರೂಪಾಯಿ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ಮಂಗಳೂರಿನ ವೇದಿಕ್ ಅವರು ಮೂರನೇ ಸ್ಥಾನ ಪಡೆದು ಜನಮೆಚ್ಚುಗೆಗಳಿಸಿದರು. ಈ ಸೀಸನ್ ವಿಶಿಷ್ಟ ಪ್ರತಿಭೆಯಾಗಿ ವೇದಿಕೆಗೆ ಆಗಮಿಸಿದ ರಾಯಚೂರಿನ ಕುಳ್ಳ ಸಿಂಗಂ ಖ್ಯಾತಿಯ ಅರುಣ್ ಅವರಿಗೆ ವಿಶೇಷ ಬಹುಮಾನವಾಗಿ ಒಂದು ಲಕ್ಷ ರುಪಾಯಿ ನಗದು ಬಹುಮಾನವನ್ನು ಸಹ ನೀಡಿ ವೇದಿಕೆ ಸಾರ್ಥಕತೆ ಮೆರೆಯಿತು

Leave a Comment

Your email address will not be published. Required fields are marked *