Ad Widget .

ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ 5 ಕೆಜಿ ಅಕ್ಕಿ ಪ್ರಮಾಣ ಕಡಿತ

ಬೆಂಗಳೂರು: ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣ ಕಡಿತವಾಗುವ ಸಾಧ್ಯತೆ ಇದೆ.

Ad Widget . Ad Widget .

ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಮಾಧ್ಯಮದ ಜೊತೆಗೆ ಮಾತನಾಡಿ, ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಆಹಾರಧಾನ್ಯವನ್ನು ಸೆಪ್ಟಂಬರ್ ವರೆಗೆ ವಿತರಿಸಲಾಗುವುದು.
ಸೆಪ್ಟೆಂಬರ್ ಗೆ ಅವಧಿ ಮುಗಿಯುವ ಕಾರಣ ಬಿಪಿಎಲ್ ಕುಟುಂಬದ ತಲಾ ಸದಸ್ಯರಿಗೆ 5 ಕೆಜಿ ಅಕ್ಕಿ ಕಡಿತವಾಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

Ad Widget . Ad Widget .

ಕೊರೋನಾ ಹಿನ್ನೆಲೆ ಬಡವರಿಗೆ ಆಹಾರ ಭದ್ರತೆ ಒದಗಿಸಲು ಕಳೆದ ಎರಡು ವರ್ಷಗಳಿಂದ ಕೇಂದ್ರ ಸರ್ಕಾರ ಉಚಿತವಾಗಿ ಆಹಾರಧಾನ್ಯ ಪೂರೈಕೆ ಮಾಡುತ್ತಿದ್ದು, ಈ ಯೋಜನೆ ಸೆಪ್ಟೆಂಬರ್ ಗೆ ಮುಕ್ತಾಯವಾಗಲಿದ್ದು, ಅಕ್ಟೋಬರ್ ಗೆ ಅಕ್ಕಿ ಕಡಿತವಾಗಬಹುದು.

ರಾಜ್ಯದ 4.01 ಕೋಟಿ ಬಿಪಿಎಲ್ ಕುಟುಂಬಗಳಿಗೆ 10 ಕೆಜಿ ಅಕ್ಕಿ, ಎರಡು ಕೆಜಿ ರಾಗಿ ಅಥವಾ ಜೋಳ ವಿತರಿಸಲಾಗುತ್ತಿದೆ. ಕೇಂದ್ರದಿಂದ ಮಾಸಿಕ 2.15 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆಯಾಗುತ್ತಿದ್ದು, ರಾಜ್ಯದ ಪಾಲು 2.25 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಗರೀಬ್ ಕಲ್ಯಾಣ ಯೋಜನೆ ಸ್ಥಗಿತಗೊಂಡ ನಂತರ 5 ಕೆಜಿ ಅಕ್ಕಿ ಹಾಗೂ ಎರಡು ಕೆಜಿ ರಾಗಿ ಅಥವಾ ಜೋಳ ವಿತರಣೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *