ಸಮಗ್ರ ನ್ಯೂಸ್: ಮಾಂಸದೂಟ ತಿನ್ನುವ ಆಸೆಯಾಗಿ ಮೇಕೆ ಕತ್ತರಿಸುವ ಕನಸು ಕಂಡ ವ್ಯಕ್ತಿ, ನಿಜವಾಗಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡಿದ್ದಾನೆ.
ಘಾನಾದ ಅಸ್ಸಿನ್ ಫೋಸು ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೋಫಿ ಅಟ್ಟಾ ಎಂಬ ವ್ಯಕ್ತಿ ನಿದ್ರೆಯಿಂದ ಎಚ್ಚರವಾದಾಗ ತನ್ನ ಮರ್ಮಾಂಗ ಕತ್ತರಿಸಿಕೊಂಡಿರುವುದನ್ನು ನೋಡಿದ್ದಾನೆ. ತೀವ್ರ ರಕ್ತಸ್ರಾವ ಉಂಟಾಗಿದ್ದರಿಂದ ಮಧ್ಯಪ್ರದೇಶದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ವೈದ್ಯರು ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಯಾಳು ಕೋಫಿ ಅಟ್ಟಾ ಸಂಬಂಧಿಕರು ಹಣ ಸಂಗ್ರಹಿಸುತ್ತಿದ್ದಾರೆ.
ನಾನು ನಿದ್ರಿಸಿದ್ದಾಗ ಕುರ್ಚಿಯಲ್ಲಿ ಕುಳಿತಿದ್ದೆ. ನಾನು ಮೇಕೆಯನ್ನು ಕತ್ತರಿಸುತ್ತಿದ್ದೇನೆ ಎಂದು ಕನಸು ಕಂಡೆ, ಆದರೆ ನನ್ನ ಜನನಾಂಗಕ್ಕೆ ಹೇಗೆ ಚಾಕು ಹಾಕಿಕೊಂಡೆ ಎಂಬುದರ ಬಗ್ಗೆ ಯಾವ ನೆನಪೂ ಇಲ್ಲ ಎಂದು ಹೇಳಿಕೊಂಡಿದ್ದಾನೆ.