ಸಮಗ್ರ ನ್ಯೂಸ್ : ರಾಜ್ಯದಲ್ಲಿ ಕೆಲ ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಹೆಚ್ಚಾಗಲಿದೆ. ಇನ್ನೊಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಾರಣದಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ ವಾರ ರಾಜ್ಯದ ಬಹುತೇಕ ಕಡೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಿಗೆ ಈ ವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ಹಗುರ ಮಳೆಯಾಗಲಿದೆ. ರಾಜ್ಯದ ಬಹುತೇಕ ಕಡೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ ಎಂದು
ಹವಾಮಾನ ಇಲಾಖೆಯ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಕೆಲವು ಜಿಲ್ಲೆಗಳಿಗೆ ಐದು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಹಾಕಲಾಗಿದೆ. ಇಂದು ಮತ್ತು ನಾಳೆ ಚಿಕ್ಕಮಗಳೂರು, ಕೊಡಗು ಜಿಲ್ಲೆಗೂ ಯೆಲ್ಲೋ ಅಲರ್ಟ್ ಹಾಕಲಾಗಿದೆ. ಆ.24ರ ಬಳಿಕ ರಾಜ್ಯದಲ್ಲಿ ಇನ್ನಷ್ಟು ಮಳೆ ಹೆಚ್ಚಾಗಲಿದೆ.
ಆ.24ರಂದು ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೆಯೇ ಆ.25ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯಲ್ಲೋ ಅಲರ್ಟ್ ಇರಲಿದೆ. ಕರಾವಳಿಯಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದ್ದು, ಆ.24, 25, 26 ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ.