8 ತಿಂಗಳ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಲೆ ಮಾಡಿದ ಪೋಲಿಸ್ ಅಧಿಕಾರಿ

ಸಮಗ್ರ ನ್ಯೂಸ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ (ಎಸ್‌ಪಿಒ) ಮಂಗಳವಾರ ತನ್ನ ಗರ್ಭಿಣಿ ಪತ್ನಿಯನ್ನು ಹೊಡೆದು ಕೊಂದಿರುವ ಘಟನೆಯೊಂದು ನಡೆದಿದ್ದು, ಇದೀಗ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

. Ad Widget . Ad Widget . Ad Widget .

ಕಥುವಾ ಜಿಲ್ಲಾ ಪೊಲೀಸ್ ಲೈನ್‌ನಲ್ಲಿ ನಿಯೋಜಿತರಾಗಿರುವ ಎಸ್‌ಪಿಒ ಮೋಹನ್ ಲಾಲ್ ಪತ್ನಿಯನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮೃತ ಮಹಿಳೆಯನ್ನು ಆಶಾದೇವಿ (32) ಎಂದು ಗುರುತಿಸಲಾಗಿದೆ. ಇವರಿಗೆ ಇಬ್ಬರು ಹೆಣ್ಣು ಮಕ್ಕಳು ಸಹ ಇದ್ದು, ಬಿಲ್ಲವರ್ ಪ್ರದೇಶದ ಧರಾಲ್ಟಾ ಗ್ರಾಮದ ನಿವಾಸಿಯಾಗಿದ್ದಾರೆ.

ಲಾಲ್ ಕಳೆದ ಮೂರು ದಿನಗಳಿಂದ ರಜೆಯ ಮೇಲಿದ್ದರು. ಈ ವೇಳೆ ದಂಪತಿಗಳ ನಡುವೆ ಜಗಳವಾಗಿದ್ದು, ಪತ್ನಿಯನ್ನು ಬರ್ಬರವಾಗಿ ಕೊಂದಿದ್ದಾನೆ.

ಈ ವೇಳೆ ಅಕ್ಕ ಪಕ್ಕದವರು ಬರುವ ವೇಳೆ ಲಾಲ್ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬರುವ ಮೊದಲೇ ಆಕ್ರೋಶಗೊಂಡ ಸ್ಥಳೀಯರು ಲಾಲ್ ಮನೆಗೆ ಬೆಂಕಿ ಹಚ್ಚಿದ್ದಾರೆ.

ಮೃತ ಮಹಿಳೆ ಎಂಟು ತಿಂಗಳ ಗರ್ಭಿಣಿಯಾಗಿದ್ದು, ಆಕೆಯ ಮಗು ಸಹ ಆಕೆಯ ಹೊಟ್ಟೆಯಲ್ಲೇ ಸಾವನ್ನಪ್ಪಿದೆ. ಆರೋಪಿಯನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಚಂದರ್ ಕೊತ್ವಾಲ್ ತಿಳಿಸಿದ್ದಾರೆ.

Leave a Comment

Your email address will not be published. Required fields are marked *