ಮೂಡಿಗೆರೆ: ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವನಪ್ಪಿದ ಘಟನೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ.

ಜಿಂಕೆ ಕಾಡಿನಿಂದ ನಾಡಿಗೆ ಬಂದಾಗ ನಾಯಿಗಳು ಬೆದರಿಸಿದ ಹಿನ್ನೆಲೆ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳೀಯರಾದ ರವೀಂದ್ರ ಎಂಬವರು ನೀರು ಕುಡಿಸಿ ಜಿಂಕೆಯನ್ನು ಬದುಕಿಸಲು ಪ್ರಯತ್ನ ಪಟ್ಟಿದ್ದಾರೆ.

ಅರಣ್ಯ ರಕ್ಷಕ ಅಭಿಜಿತ್ ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ
ಪರಿಶೀಲನೆ ನಡೆಸಿದ್ದಾರೆ.