Ad Widget .

ಕಾಂಗ್ರೆಸ್ ಗೆ ಬಿಗ್ ಶಾಕ್; ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಗುಲಾಂ ನಬಿ ಆಜಾದ್

ಸಮಗ್ರ ನ್ಯೂಸ್: ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಶಾಕ್ ನೀಡಿದ್ದಾರೆ

Ad Widget . Ad Widget .

ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ G23 ನಾಯಕರ ಗುಂಪಿನ ಸದಸ್ಯರಾಗಿದ್ದ ಗುಲಾಂ ನಬಿ ಆಜಾದ್ ಅವರು ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದಿದ್ದರು.

Ad Widget . Ad Widget .

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ಅವರು ಪಕ್ಷದ ಪ್ರಮುಖ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನಗಳ ನಂತರ ಆಜಾದ್ ರಾಜೀನಾಮೆ ನೀಡಿದ್ದಾರೆ,

ಆಜಾದ್ ನಿರ್ಗಮನದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ, ಕಾಂಗ್ರೆಸ್ ಪಕ್ಷವು ಯಾವುದೇ ನಾಯಕತ್ವ ಅಥವಾ ಸಿದ್ದಾಂತವಿಲ್ಲದೆ ಮುಳುಗುತ್ತಿರುವ ಹಡಗು ಎಂದು ಹೇಳಿದೆ.

Leave a Comment

Your email address will not be published. Required fields are marked *