Ad Widget .

ಮೂರು ಅಂತಸ್ತಿನ‌ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ,5ಮಂದಿ ಸಾವು, 7ಮಂದಿಗೆ ಗಾಯ

ಸಮಗ್ರ ನ್ಯೂಸ್: ಒಂದೇ ಕುಟುಂಬದ ಸದಸ್ಯರು ವಾಸಿಸುತ್ತಿದ್ದ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 5ಮಂದಿ ಸಜೀವ ದಹನವಾಗಿರುವ ಘಟನೆಯೊಂದು ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ.

Ad Widget . Ad Widget .

ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

ಅಪಘಾತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪೊಲೀಸರು ಶಂಕಿಸಿದ್ದು, ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಗಳು ನಡೆಯುತ್ತಿದ್ದು, ಕಟ್ಟಡದಲ್ಲಿ ಸಿಲುಕಿರುವವರನ್ನು ಹೊರತರುವ ಕಾರ್ಯ ನಡೆದಿದೆ ಎಂದರು. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಕಟ್ಟಡದಿಂದ ಏಳು ಜನರನ್ನು ಹೊರಗೆ ಕರೆತಂದು ಅವರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು ಅವರ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಕಟ್ಟಡದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಅಮರುದ್ದೀನ್, ಸಮರ್, ಶಮಾ, ನಫಿಯಾ, ಇಬಾದ್ ಹಾಗೂ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಅಪಘಾತದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *