Ad Widget .

ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರಿಲ್ಲ, ನನಗೆ ಯಾರೂ ಕಾಣಿಸುತ್ತಿಲ್ಲ – ಖರ್ಗೆ

ಸಮಗ್ರ ನ್ಯೂಸ್: ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಕಾಂಗ್ರೆಸ್ ನಲ್ಲಿ ದೇಶ ಮಟ್ಟದಲ್ಲಿ ನಾಯಕನ ವರ್ಚಸ್ಸು, ಖ್ಯಾತಿ ಗಳಿಸಿರುವ ನಾಯಕ ಇಲ್ಲದ ಕಾರಣ ಅವರನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಮನವೊಲಿಸಲಾಗುವುದು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Ad Widget . Ad Widget .

ರಾಹುಲ್ ಗಾಂಧಿ ಬಿಟ್ಟರೆ ಯಾರಿದ್ದಾರೆ ಹೇಳಿ, ನನಗೆ ಬೇರೊಬ್ಬರು ಕಾಣಿಸುತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂದಾಳತ್ವ ವಹಿಸಿಕೊಳ್ಳಲು ಸಿದ್ಧರಿಲ್ಲ ಎಂಬ ವರದಿಗಳ ಕುರಿತು, ಖರ್ಗೆ ಅವರು “ಪಕ್ಷಕ್ಕಾಗಿ, ದೇಶಕ್ಕಾಗಿ, ಆರ್‌ಎಸ್‌ಎಸ್-ಬಿಜೆಪಿ ವಿರುದ್ಧ ಹೋರಾಡಲು ಮತ್ತು ದೇಶವನ್ನು ಉಳಿಸಿಕೊಳ್ಳಲು ಅಧಿಕಾರ ವಹಿಸಿಕೊಳ್ಳುವಂತೆ ಅವರನ್ನು ವಿನಂತಿಸಿಕೊಳ್ಳಲಾಗುವುದು ಎಂದರು.

Ad Widget . Ad Widget .

ಪಕ್ಷದ ಮುಂಬರುವ “ಭಾರತ್ ಜೋಡೋ ಯಾತ್ರೆ” ಬಗ್ಗೆಯೂ ಉಲ್ಲೇಖಿಸಿದ ಖರ್ಗೆ, ‘ಜೋಡೋ ಭಾರತ್’ಗೆ ರಾಹುಲ್ ಗಾಂಧಿ ಅಗತ್ಯವಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *