Ad Widget .

ಧರ್ಮಸ್ಥಳದಲ್ಲಿ ನಿರ್ಮಾಣಗೊಳ್ಳಲಿದೆ ಮಿನಿ ವಿಮಾನ ನಿಲ್ದಾಣ| 100 ಕೋಟಿ ವೆಚ್ಚದ ಯೋಜನೆಗೆ ಶೀಘ್ರದಲ್ಲೇ ಚಾಲನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅತ್ಯಧಿಕ ಭಕ್ತರು ಸಂದರ್ಶಿಸುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

Ad Widget . Ad Widget .

ಬೆಳ್ತಂಗಡಿಯಲ್ಲಿ ಶನಿವಾರ 1500 ಫಲಾನುಭವಿಗಳಿಗೆ ವಸತಿ ಆದೇಶ ಪತ್ರ ವಿತರಣೆಗೊಳಿಸಿ ಅವರು ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಭಾಗದಲ್ಲಿ ನಾಲ್ಕು ಹೆಲಿಕಾಪ್ಟರ್‌ಗಳು ಏಕ ಕಾಲದಲ್ಲಿ ಲ್ಯಾಂಡಿಂಗ್ ಆಗಲು ಅವಕಾಶವಿರುವ ಲಘು ವಿಮಾನ ನಿಲ್ದಾಣ ನಿರ್ಮಿಸಲಾಗುವುದು, ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಶಾಸಕ ಹರೀಶ್ ಪೂಂಜಾ ಅವರ ಕೋರಿಕೆಯಂತೆ ಪ್ರಸ್ತಾವಿತ ಯೋಜನೆಯನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದ್ದು, ಪ್ರಥಮ ಹಂತದಲ್ಲಿ 100 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಲಿದೆ ಎಂದರು.

Ad Widget . Ad Widget .

ಸದ್ಯ‌ ಧರ್ಮಸ್ಥಳಕ್ಕೆ ಮಂಗಳೂರು ವಿಮಾನ ನಿಲ್ದಾಣವೇ ಹತ್ತಿರವಾಗಿದ್ದು, ಉಳಿದಂತೆ ತುರ್ತು ಸಂದರ್ಭದಲ್ಲಿ ಹೆಲಿಪ್ಯಾಡ್ ಹಾಗೂ ಭಕ್ತಾದಿಗಳಿಗೆ ಸಂದರ್ಶಿಸಲು ರಸ್ತೆ ಮಾರ್ಗವಷ್ಟೇ ಇದೆ. ಮಿನಿ ವಿಮಾನ ನಿಲ್ದಾಣ ನಿರ್ಮಾಣವಾದರೆ‌ ಭಕ್ತಾದಿಗಳಿಗೆ ಅನುಕೂಲವಾಗಲಿದೆ.

Leave a Comment

Your email address will not be published. Required fields are marked *