ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ವಿಧಿವಶ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರು ಅನಾರೋಗ್ಯದಿಂದಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Ad Widget ... ..

ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಹೊಸಹಳ್ಳಿಯಲ್ಲಿರುವ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

Ad Widget

ರಾಮೇಗೌಡ ಅವರಿಗೆ 69 ವರ್ಷ ವಯಸ್ಸಾಗಿತ್ತು, ಮೃತರು ಪತ್ನಿ ರುಕ್ಮಿಣಿ ಮಕ್ಕಳಾದ ರವಿ ರಘು ಮಗಳು ನಾಗರತ್ನ (ಬೋರಮ್ಮ) ಸೇರಿದಂತೆ ಕುಟುಂಬದ ಬಳಗವನ್ನು ಅಗಲಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ “ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ದರಾಮಯ್ಯ ರವರ ಕಿರಿಯ ಸಹೋದರ ಶ್ರೀ ರಾಮೇಗೌಡ ಅವರ ನಿಧನದ ವಿಷಯ ತಿಳಿದು ದುಃಖಿತನಾಗಿದ್ದೇನೆ.ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಿ, ಕುಟುಂಬ ವರ್ಗದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಓಂ‌ ಶಾಂತಿಃ” ಎಂದು ಕಂಬನಿ ಮಿಡಿದಿದ್ದಾರೆ.

Leave a Comment

Your email address will not be published. Required fields are marked *