ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರವು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ನಿಷೇಧಿಸಿದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪು ವಿರುದ್ಧ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ನಾಳೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
ಕಳೆದ ಕೆಲವು ದಿನಗಳಿಂದ ತಣ್ಣಗಾದಂತೆ ಕಂಡುಬಂದಿದ್ದ ಹಿಜಾಬ್ ವಿಷಯ ನಾಳೆ ಮತ್ತೆ ಮುನ್ನಲೆಗೆ ಬರಲಿದೆ. ವಿಚಾರಣೆಯ ಅಂತ್ಯದಲ್ಲಿ ಸುಪ್ರೀಂ ತೀರ್ಪು ಯಾರ ಪರವಾಗಿರಲಿದೆ? ರಾಜ್ಯ ಸರಕಾರಕ್ಕೆ ಹಿನ್ನಡೆಯಾಗಲಿದೆಯೇ? ಮೇಲ್ಮನವಿ ಸಲ್ಲಿಸಿದವರಿಗೆ ಹಿನ್ನಡೆಯಾಗಲಿದೆಯೇ? ಇತ್ಯಾದಿ ಪ್ರಶ್ನೆಗಳೂ ಮೂಡಿವೆ.
ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಆಗಸ್ಟ್ 29, ಸೋಮವಾರ, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶದ ವಿರುದ್ಧದ ಮೇಲ್ಮನವಿಗಳ ವಿಚಾರಣೆ ನಡೆಸಲಿದೆ.