Ad Widget .

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ

ಸಮಗ್ರ ನ್ಯೂಸ್: ಸಪ್ಟೆಂಬರ್​ 2 ರಂದು ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರಿ ಸಮಾವೇಶಕ್ಕೆ ವಿಶಾಲ ಜರ್ಮನ್ ಪೆಂಡಾಲ್ ಅಳವಡಿಸಲು ಮತ್ತು ವೇದಿಕೆ ಸಹಿತ ಇಡೀ ಸಭಾಂಗಣ ಪೂರ್ತಿ ನೆಲದಿಂದ ಎತ್ತರದಲ್ಲಿ ಇರುವಂತೆ ಸಿದ್ಧತೆ ಆರಂಭವಾಗಿದೆ. ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

Ad Widget . Ad Widget .

ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ ಫ್ಲ್ಯಾಟ್‌ಫಾರಂ ರಚಿಸಲಾಗುತ್ತದೆ. ಇದರಿಂದಾಗಿ ಒಂದು ವೇಳೆ ಮಳೆ ಬಂದರೂ ಕಾರ್ಯಕ್ರಮಕ್ಕೆ ತೊಂದರೆಯಾಗದು.

Ad Widget . Ad Widget .

ಮಂಗಳೂರಿಗೆ ಮೋದಿ ಆಗಮನಕ್ಕೆ ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ವೇದಿಕೆ ಸಿದ್ಧ
ಸಮಾವೇಶ ನಡೆಯುವ ಸ್ಥಳದಲ್ಲಿ ಜರ್ಮನ್ ಮಾದರಿ ಬೃಹತ್ ಪೆಂಡಾಲ್ ನಿರ್ಮಾಣವಾಗಲಿದೆ. ಇದು ಮಳೆಯಿಂದ ಪೂರ್ತಿ ರಕ್ಷಣೆ ನೀಡುತ್ತದೆ. ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಗೋಲ್ಡ್‌ಫಿಂಚ್ ಸಿಟಿಯ 30 ಎಕರೆ ಜಾಗವನ್ನು ಪೂರ್ತಿ ಸ್ವಚ್ಚಗೊಳಿಸುವ ಕೆಲಸ ಭರದಿಂದ ಸಾಗಿದೆ.

ಅಲ್ಲಲ್ಲಿರುವ ಗಿಡಗಂಟೆ, ಮೋರಿ, ಪೈಪುಗಳನ್ನು ತೆರವು ಮಾಡಲಾಗುತ್ತಿದೆ. ಜೆಸಿಬಿ ಮೂಲಕ ಹಗಲು ರಾತ್ರಿ ಮೈದಾನವನ್ನು ಸಮತಟ್ಟುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಅಲ್ಲಲ್ಲಿ ಮಣ್ಣು, ಜಲ್ಲಿಪುಡಿಗಳನ್ನು ಬಳಸಿ ಮೈದಾನದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲಾಗುತ್ತಿದೆ.

Leave a Comment

Your email address will not be published. Required fields are marked *