Ad Widget .

ಆತಂಕಪಡಬೇಡಿ,ಧೈರ್ಯವಾಗಿರಿ| ಆರೋಪಗಳಿಂದ ಮುಕ್ತನಾಗಿ ಬರುತ್ತೇನೆ – ಮುರುಘಾ ಶ್ರೀ ಹೇಳಿಕೆ

ಸಮಗ್ರ ನ್ಯೂಸ್: ನಿಮ್ಮೆಲ್ಲರ ಸಲುವಾಗಿ ನಾವು ಧೈರ್ಯವಾಗಿ ಇರುತ್ತೇವೆ. ಯಾವುದೇ ಕಾರಣಕ್ಕೂ ಆತಂಕ ಪಡಬೇಕಿಲ್ಲ. ನಾವುಗಳು ಈ ನೆಲದ ಕಾನೂನನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಕಾನೂನಿಗೆ ನಾವು ಯಾವತ್ತೂ ಗೌರವ ಕೊಡುತ್ತೇವೆ. ಇದರಲ್ಲಿ ಯಾವುದೇ ಪಲಾಯನ ವಾದ ಇಲ್ಲ ಎಂದು ಚಿತ್ರದುರ್ಗದ ಮುರುಘಾಮಠದಲ್ಲಿ ಡಾ.ಶಿವಮೂರ್ತಿ ಸ್ವಾಮೀಜಿಗಳು ಹೇಳಿದ್ದಾರೆ.

Ad Widget . Ad Widget .

ಯಾವುದೇ ಊಹಾಪೋಹಗಳಿಗೆ ಅವಕಾಶ ಇಲ್ಲ. ಈ ಮುಖಾಂತರ ಶ್ರೀ ಮಠದ ಭಕ್ತರು ಗಾಳಿ ಸುದ್ದಿಗಳಿಗೆ ಕಿವಿ ಕೊಡಬಾರದು ಎಂದು ಮುರುಘಾ ಶ್ರೀಗಳು ಭಕ್ತರಲ್ಲಿ ಮನವಿ ಮಾಡಿದ್ದಾರೆ.

Ad Widget . Ad Widget .

ಎಲ್ಲ ರೀತಿಯ ಸಹಕಾರವನ್ನು ಕೊಡುತ್ತೇವೆ. ಮುರುಘಾಮಠ ಒಂದು ಕಾಲದಲ್ಲಿ ಚಲಿಸುವ ನ್ಯಾಯಾಲಯವಾಗಿತ್ತು. ನನ್ನ ವಿರುದ್ಧ ಪಿತೂರಿ ನಡೆಯುತ್ತಿದೆ. ಒಳಗೆ ನಡೆಯುತ್ತಿದ್ದ ಪಿತೂರಿ ಈಗ ಹೊರಗಡೆ ನಡೆಯುತ್ತಿದೆ. ಎದುರಾಗಿರುವ ಸಮಸ್ಯೆಯನ್ನು ಶಾಂತವಾಗಿ ಪರಿಹರಿಸೋಣ. ತಾರ್ಕಿಕ ಅಂತ್ಯ ಹಾಡುವ ನಿಟ್ಟಿನಲ್ಲಿ ಕೆಲಸ ಮಾಡೋಣ. ಎಲ್ಲಾ ಆರೋಪಗಳಿಂದ ಮುಕ್ತನಾಗಿ ನಾನು ಹೊರಬರುತ್ತೇನೆ. ಒಗ್ಗಟ್ಟಾಗಿ ಹೋರಾಡೋಣ ಎಂದು ಮುರುಘಾಶ್ರೀಗಳು ಹೇಳಿದ್ದಾರೆ.

Leave a Comment

Your email address will not be published. Required fields are marked *