Ad Widget .

ಸರ್ಕಾರಿ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ‌ನ್ಯೂಸ್

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. ಬಿಡುಗಡೆಗೆ ಆದೇಶಿಸಲಾಗಿದೆ.

Ad Widget . Ad Widget .

ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಗೆ ತಕ್ಕಂತೆ ಮೊತ್ತವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ

Ad Widget . Ad Widget .

ಒಂದರಿಂದ ಐದನೇ ತರಗತಿಯ ಮಕ್ಕಳಿಗೆ ತಲಾ 265 ರೂ, ಆರರಿಂದ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ತಲಾ 295 ರೂ ಮತ್ತು 9, 10 ನೇ ತರಗತಿಯ ವಿದ್ಯಾರ್ಥಿಗಳಿಗೆ ತಲಾ 325 ರೂ. ಬಳಸಲು ನಿಗದಿಪಡಿಸಲಾಗಿದೆ.

ತಾಲೂಕುವಾರು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಖಜಾನೆ 2 ಮೂಲಕ ನೇರವಾಗಿ 204 ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಎಸ್.ಡಿ.ಎಂ.ಸಿ. ಗಳ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ ಅನುದಾನ ಹಂಚಿಕೆ ಮಾಡಲು ಶಿಕ್ಷಣ ಇಲಾಖೆ ಆಯುಕ್ತರು ನಿರ್ದೇಶನ ನೀಡಿದ್ದಾರೆ. ಈ ಅನುದಾನವನ್ನು ಅನ್ಯ ಕಾರಣಕ್ಕೆ ಬಳಸದಂತೆ ಸೂಚನೆ ನೀಡಲಾಗಿದೆ.

Leave a Comment

Your email address will not be published. Required fields are marked *