ಸಮಗ್ರ ನ್ಯೂಸ್: ಸಂಪಾಜೆ ವ್ಯಾಪ್ತಿಯಲ್ಲಿ ಭಾರಿ ಮಳೆಯಿಂದಾಗಿ ಎರಡು ಕಡೆ ಭೂ ಕುಸಿತ ಉಂಟಾಗಿರುವಂತಹ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ದೇವರಕೊಲ್ಲಿ ಗ್ರಾಮದ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಹಿನ್ನೆಲೆ ಸಂಪರ್ಕ ಕಡಿತವಾಗಿದ್ದು ಮಡಿಕೇರಿ- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತವಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲುಗಟ್ಟಿ ವಾಹನಗಳು ನಿಂತಿವೆ. ಮಣ್ಣಿನೊಂದಿಗೆ ರಸ್ತೆ ಮೇಲೆ ಮರಗಳು ಬಂದು ಬಿದ್ದಿದ್ದು, ರಸ್ತೆಯಲ್ಲಿ ಬಿದ್ದಿರುವ ಮರವನ್ನು ಪ್ರಯಾಣಿಕರು ತೆರವುಗೊಳಿಸಿದರು.
ಕೊಡಗಿನ ದೇವರಕೊಲ್ಲಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆಗಳಲ್ಲಿ ಭೂಕುಸಿತದ ಪರಿಣಾಮ, ಹೆದ್ದಾರಿಯ ಸಂಚಾರಕ್ಕೆ ಅಡ್ಡಿಯುಂಟಾಯಿತು. ಅಲ್ಲದೇ ರಸ್ತೆ ಸಂಚಾರ ಬಂದ್ ಆದ ಕಾರಣ, ವಾಹನಗಳು ಸಾಲುಗಟ್ಟಿ ನಿಂತು, ಟ್ರಾಫಿಕ್ ಜಾಮ್ ಉಂಟಾಗಿ, ಕೆಲ ಗಂಟೆಗಳ ಕಾಲ ಸಂಚಾರ ದಟ್ಟಣೆಯಲ್ಲಿ ಸಿಲುಕುವಂತೆ ಆಯಿತು.