Ad Widget .

ರಾಜ್ಯದಲ್ಲಿ ಮೂರು ದಿನ ಮಹಾಮಳೆ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಗೌರಿ ಗಣೇಶದ ಹಬ್ಬದ ಹೊತ್ತಲ್ಲೇ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದ ಬಹುತೇಕ ಭಾಗದಲ್ಲಿ ಭಾರಿ ಮಳೆಯ ಕಾರಣ ಜನ ಜೀವನ ಅಸ್ತವ್ಯಸ್ತಗೊಂಡಿದೆ.

Ad Widget . Ad Widget .

ಮಂಗಳವಾರದಿಂದ ಮೂರು ದಿನಗಳ ಕಾಲ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಆಗಸ್ಟ್ 30 ರಿಂದ ಸೆಪ್ಟೆಂಬರ್ 1 ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Ad Widget . Ad Widget .

ಇನ್ನು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಮಲ್ಲೇಶ್ವರಂನ ಕೆಲವು ರಸ್ತೆಗಳಲ್ಲಿ ನೀರು ತುಂಬಿದೆ. ವಾಹನ ಸವಾರರು ಹರಸಾಹಸ ಪಡ್ತಿದ್ದಾರೆ. ನಾಯಂಡಹಳ್ಳಿ,ಲಗ್ಗೆರೆ, ಶಿವಾನಂದ ವೃತ್ತ ಸೇರಿದಂತೆ ನಗರದ ಬಹುತೇಕ ಅಂಡರ್ ಪಾಸ್ ಗಳು ಮಳೆ‌ ನೀರಿನಿಂದ ಆವೃತವಾಗಿವೆ. ಉತ್ತರಹಳ್ಳಿ 39.5ಮಿ.ಮೀ, ನಾಯಂಡಗಳ್ಳಿ 49.5ಮಿ.ಮೀ ಮಳೆ, ಹಂಪಿ ನಗರ 44.5ಮಿ.ಮೀ ಮಳೆ, ಹೆಚ್.ಗೊಲ್ಲಹಳ್ಳಿ 44.5ಮಿ.ಮೀ, ಕೋಣನಕುಂಟೆ 55.0ಮಿ.ಮೀ, ಅರಕೆರೆ(ಬೊಮ್ಮನಹಳ್ಳಿ) 47.5ಮಿ.ಮೀ, ಬಿಳೇಕಹಳ್ಳಿ 60.5ಮಿ.ಮೀ ಪ್ರಮಾಣದಲ್ಲಿ ಮಳೆಯಾಗಿದೆ ಎಂದು ಹಮಾವಾನ ಇಲಾಖೆ ಮಾಹಿತಿ ನೀಡಿದೆ.

ಭಾರೀ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ, ಚಾಮರಾಜನಗರ ಜಿಲ್ಲೆ ಹಾಗೂ ರಾಮನಗರ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿದ್ದರೆ, ಬೆಂಗಳೂರು ನಗರದಲ್ಲಿ ಮಂಗಳವಾರ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಮನಗರ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾದರೆ, ತುಮಕೂರು, ಕೋಲಾರ, ಹಾವೇರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ವಿಜಯನಗರ, ಧಾರವಾಡ, ಬಳ್ಳಾರಿ, ಯಾದಗಿರಿ, ಗದಗದಲ್ಲಿ ಕೆಲಕಾಲ ಸಾಧಾರಣದಿಂದ ಜಿಟಿಜಿಟಿ ಮಳೆಯಾಗಿದೆ. ರಾಮನಗರ ಜಿಲ್ಲೆಯಲ್ಲಿ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆಗೆ ತುಂಬಿದ ಕೆರೆಗಳಿಂದಾಗಿ ಪ್ರವಾಹದ ಸ್ಥಿತಿಯೇ ನಿರ್ಮಾಣವಾಗಿದೆ.

Leave a Comment

Your email address will not be published. Required fields are marked *