Ad Widget .

ಪ.ಪೂ ಕಾಲೇಜುಗಳ‌ ಮಧ್ಯಂತರ ರಜೆ ಒಂದು ದಿನ ವಿಸ್ತರಿಸಿ ಸರ್ಕಾರ ಆದೇಶ

ಸಮಗ್ರ‌ ನ್ಯೂಸ್: ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಪದವಿ ಪೂರ್ವ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಲ್ಲದೇ ಅಕ್ಟೋಬರ್ 14ರಿಂದ ಕಾಲೇಜುಗಳನ್ನು ಪುನರಾರಂಭಿಸಲು ಸೂಚಿಸಲಾಗಿದೆ.

Ad Widget . Ad Widget .

ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಪದವಿಪೂರ್ವ ಶಿಕ್ಷಣ ಇಲಾಖೆಯ 2022-23ನೇ ಶೈಕ್ಷಣಿಕ ಸಾಲಿನ ದಾಖಲಾತಿ ಮಾರ್ಗಸೂಚಿಯಲ್ಲಿ ಮಧ್ಯಂತರ ರಜೆಯನ್ನು ದಿನಾಂಕ 01-10-2022 ರಿಂದ 12-10-2022ರವರೆಗೆ ನಿಗದಿ ಪಡಿಸಲಾಗಿತ್ತು ಎಂದು ತಿಳಿಸಿದ್ದಾರೆ.

Ad Widget . Ad Widget .

ಇದೀಗ ದಿನಾಂಕ 13-10-2022ರಂದು ಒಂದು ದಿನ ಹೆಚ್ಚುವರಿಯಾಗಿ ರಜೆಯನ್ನು ವಿಸ್ತರಿಸಲಾಗಿದೆ. ಹೀಗಾಗಿ ಎಲ್ಲಾ ಪದವಿ ಪೂರ್ವ ಕಾಲೇಜುಗಳನ್ನು ದಿನಾಂಕ 14-10-2022ರಿಂದ ಮರು ಪ್ರಾರಂಭಿಸುವಂತೆ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *