Ad Widget .

ಸೆ‌. 02: ಮಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ 2 ರಂದು ‌ಮಂಗಳೂರಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ಸೆಪ್ಟೆಂಬರ್ 2ರಂದು ಮಂಗಳೂರಿನಲ್ಲಿ ‌ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮ ಹಾಗೂ ನಗರದ ಹಲವೆಡೆ ಗಣೇಶೋತ್ಸವದ ವಿಸರ್ಜನಾ‌ ಮೆರವಣಿಗೆಗಳು ಇರುವ ಕಾರಣದಿಂದ
ಜನ ಸಂಚಾರ ಮತ್ತು‌ ವಾಹನ ದಟ್ಟಣೆಯಾಗುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.

Ad Widget . Ad Widget .

ಮಂಗಳೂರು ನಗರದ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಕಟಣೆ ಹೊರಡಿಸಲಾಗಿದೆ.

Leave a Comment

Your email address will not be published. Required fields are marked *