Ad Widget .

ಮೈಸೂರು ವಿಶ್ವವಿದ್ಯಾನಿಲಯದಿಂದ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಮೈಸೂರು ವಿಶ್ವ ವಿದ್ಯಾಲಯದಲ್ಲಿ ಸಂಶೋಧಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಶೋಧನಾ ಸಹಾಯಕ, ಕ್ಷೇತ್ರ ತನಿಖಾಧಿಕಾರಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 2 ಆಗಿದೆ.

Ad Widget . Ad Widget .

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

Ad Widget . Ad Widget .

ವಿಶ್ವವಿದ್ಯಾಲಯದ ಹೆಸರು: ಮೈಸೂರು ವಿಶ್ವವಿದ್ಯಾಲಯ
ಹುದ್ದೆಯ ಹೆಸರು: ಸಂಶೋಧನಾ ಸಹಾಯಕ, ಫೀಲ್ಡ್ ಇನ್ವೆಸ್ಟಿಗೇಟರ್
ಹುದ್ದೆಗಳ ಸಂಖ್ಯೆ: 02
ಉದ್ಯೋಗ ಸ್ಥಳ: ಮೈಸೂರು
ವೇತನ: 15000-16000ರೂ. ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಮೈಸೂರು ವಿಶ್ವವಿದ್ಯಾನಿಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾನಿಲಯದ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಅರ್ಜಿ ಸಲ್ಲಿಕೆ: ಆಫ್​ಲೈನ್​
ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ
ಆಯ್ಕೆ ಪ್ರಕ್ರಿಯೆ:
ಶೈಕ್ಷಣಿಕ ಸಾಧನೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಆಗಸ್ಟ್​ ​ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02 ಸೆಪ್ಟೆಂಬರ್​ 2022

ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: uni-mysore.ac.in

Leave a Comment

Your email address will not be published. Required fields are marked *