ಗಣೇಶ ಹಬ್ಬದ ಆಚರಣೆ; ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಮುಗಿಬಿದ್ದ ಯುವಕರು

ಸಮಗ್ರ ನ್ಯೂಸ್: ನಾಡಿನಾದ್ಯಂತ ಇಂದು ಗಣೇಶ ಹಬ್ಬದ ಸಂಭ್ರಮ ಆಚರಣೆ ಆಗಿದೆ. ಎಲ್ಲೆಡೆ ಗಣೇಶ ಮೂರ್ತಿಗಳನ್ನು ಮನೆಯಲ್ಲಿ , ಏರಿಯಾಗಳಲ್ಲಿ ಕೂರಿಸಲಾಗುತ್ತದೆ. ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಯುವಕರು ಮುಗಿಬಿದ್ದಿದ್ದಾರೆ.

Ad Widget ... ..

ಬಿಜೆಪಿ ಟಿಕೆಟ್‌ ಆಕಾಂಕ್ಷಿ ಡಾ. ಇಂದ್ರೇಶ್‌ ಅವರು ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ಗಣೇಶೋತ್ಸವ ನೆಪದಲ್ಲಿ ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದಾರಾ ಎಂಬ ಮಾತುಗಳು ಕೇಳಿ ಬಂದಿದೆ.

Ad Widget

ಉಚಿತ ಗಣೇಶ ಮೂರ್ತಿ ವಿತರಿಸುವುದಾಗಿ ಹತ್ತು ದಿನಗಳ ಮುಂಚೆಯೇ ಘೋಷಣೆ ಮಾಡಿದ್ದರು. ನೋಂದಣಿ ಮಾಡಿಕೊಳ್ಳುವಂತೆ ಮೇಲುಕೋಟೆ ಕ್ಷೇತ್ರದ ಜನರಿಗೆ ಇಂದ್ರೇಶ್‌ ಕರೆ ನೀಡಿದ್ದರು.
ಉಚಿತವಾಗಿ ಗಣೇಶ ಮೂರ್ತಿ ಸಿಗುತ್ತದೆ ಎಂಬ ಆಸೆಯಿಂದ ನೂರಾರು ಸಂಖ್ಯೆಯಲ್ಲಿ ಯುವಕರು ಆಗಮಿಸಿದ್ದರು.

ಗಣೇಶ ಮೂರ್ತಿಗಾಗಿ ನಾ ಮುಂದು ತಾ ಮುಂದೆ ಎಂದು ಮುಗಿಬಿದ್ದಿದ್ದರು.

Leave a Comment

Your email address will not be published. Required fields are marked *