ಸಮಗ್ರ ನ್ಯೂಸ್ : ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಬೆಂಗಳೂರು ಮೂಲದ 6 ಮಂದಿ ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿರುವ ಘಟನೆಯೊಂದು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಮುದಗಲ್ನಲ್ಲಿ ನಡೆದಿದೆ.
ಬಂಧಿತ ನಕಲಿ ಪತ್ರಕರ್ತರು ಯೂಟ್ಯೂಬ್ ಚಾನಲ್ ಹೆಸರಿನಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ರಾಜು ಬಿ, ನಾಗರಾಜ ಸಿ, ಪ್ರದೀಪಗೌಡ, ಅರ್ಪಿತಾ, ಮಹಾದೇವಿ, ಮೇಘ ಬಂಧಿತ ನಕಲಿ ಪತ್ರಕರ್ತರು.
ಮುದಗಲ್ ನ ಅಕ್ಕಿ ವ್ಯಾಪಾರಿ ವಿರೇಶ ಎನ್ನುವವರ ಅಂಗಡಿಗೆ ನುಗ್ಗಿ ಅವರಿಗೆ ಬ್ಲ್ಯಾಕ್ಮೇಲ್ ಮಾಡಿದ್ದರು ಎನ್ನುವ ಆರೋಪ ಕೇಳಿಬಂದಿದ್ದು, ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು.
ಅಕ್ಕಿ ಮಾರಾಟಗಾರ ವಿರೇಶ್ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.