August 2022

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದವರು ಯಾರು ? ಫೋಟೊ ರಿವೀಲ್ ಮಾಡಿದ ಬಿಜೆಪಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೊಟ್ಟೆ ಎಸೆದವ ಯಾರು ಎಂದು ಬಿಜೆಪಿ ಫೋಟೋ ರಿಲೀಸ್‌ ಮಾಡಿದೆ. ಸಿದ್ದರಾಮಯ್ಯನವರ ಕಾರಿನ ಮೇಲೆ ಸಂಪತ್ ಎನ್ನುವ ವ್ಯಕ್ತಿ ಮೊಟ್ಟೆ ಎಸೆದಿರುವುದು ಬೆಳಕಿಗೆ ಬಂದಿದೆ. ಆದ್ರೆ, ಆತ ಯಾವ ಪಕ್ಷದ ಕಾರ್ಯಕರ್ತರ ಎನ್ನುವುದು ಮಾತ್ರ ಚರ್ಚೆಗೆ ಗ್ರಾಸವಾಗಿದೆ. ಸ್ವತಃ ಸಂಪತ್‌ ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿಕೆ ಕೊಟ್ಟಿದ್ದಾನೆ. ಅಲ್ಲದೇ ಇತ್ತ ಕಾಂಗ್ರೆಸ್ ಆ ಸಂಪತ್ ಬಿಜೆಪಿ ಕಾರ್ಯಕರ್ತ ಎನ್ನುವ ಫೋಟೋಗಳನ್ನ […]

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದವರು ಯಾರು ? ಫೋಟೊ ರಿವೀಲ್ ಮಾಡಿದ ಬಿಜೆಪಿ Read More »

ಆಮೆರಿಕದಲ್ಲಿ ಗಿನ್ನಿಸ್ ದಾಖಲೆ ಪುಟ ಸೇರಿದ  ಭಗವದ್ಗೀತೆ ಪಠಣ

ಸಮಗ್ರ ನ್ಯೂಸ್ : ಧರ್ಮಗ್ರಂಥ ಭಗವದ್ಗೀತೆಯ ಎಲ್ಲ 700 ಶ್ಲೋಕಗಳನ್ನು ಕಂಠಪಾಠ ಮಾಡಿ, ಅದನ್ನು 2,200ಕ್ಕೂ ಹೆಚ್ಚು ಜನರು ಸಾಮೂಹಿಕವಾಗಿ ಹೇಳುವ ಜಾಗತಿಕ ಕಾರ್ಯಕ್ರಮ ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್‌ನಲ್ಲಿ ಜರುಗಿತು. ಈ ಗೀತೆ ಗಾಯನ ಗಿನ್ನೆಸ್ ದಾಖಲೆ ಪುಟ ಸೇರಿದೆ. ಮೈಸೂರಿನ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಇತ್ತೀಚೆಗೆ ಈ ಅಭೂತಪೂರ್ವ ಕಾರ್ಯಕ್ರಮ ನಡೆದಿದೆ. ಜಗತ್ತಿನ 30ಕ್ಕೂ ಅಧಿಕ ದೇಶಗಳ ಜನರು ಈ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಆಮೆರಿಕದಲ್ಲಿ ಗಿನ್ನಿಸ್ ದಾಖಲೆ ಪುಟ ಸೇರಿದ  ಭಗವದ್ಗೀತೆ ಪಠಣ Read More »

ಡ್ರಾಮ ಜೂನಿಯರ್ ಸೀಸನ್ 4ರ ವಿಜೇತೆ ಸಮೃದ್ಧಿ ಎಸ್ ಮೊಗವೀರ್

ಬೆಂಗಳೂರು: ಜೀ ಕನ್ನಡ ವಾಹಿನಿಯ ಡ್ರಾಮ ಜೂನಿಯರ್ ಸೀಸನ್ 4ರ ವಿಜೇತರಾಗಿ ಕುಂದಾಪುರದ ಸಮೃದ್ಧಿ ಎಸ್ ಮೊಗವೀರ್ ರವರು ಹೊರಹೊಮ್ಮಿದ್ದಾರೆ. ತಮ್ಮ ಅದ್ಭುತ ಅಭಿನಯದ ಮೂಲಕ ಮನಸೂರೆಗೊಂಡಿದ್ದ 15 ಮಕ್ಕಳು ಫೈನಲ್ ಗೆ ಆಯ್ಕೆಯಾಗಿದಿದ್ದು ವಿಶೇಷವಾಗಿತ್ತು. ಅವರಲ್ಲಿ ನಾಲ್ಕು ಮಕ್ಕಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು ತ್ರಿವಳಿ ರತ್ನಗಳು ಉತ್ತಮರಲ್ಲಿ ಅತ್ಯುತ್ತಮರನ್ನು ವಿಜೇತರನ್ನಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರತಿಯೊಬ್ಬ ಮಗುವಿಗೂ ಪದಕ ನೀಡುವ ಮೂಲಕ ಉಳಿದ 11 ಪ್ರತಿಭೆಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ಗುಣಮಟ್ಟ ಹಾಗು ವಿಶೇಷತೆಗೆ ಸಾಕ್ಷಿಯಂತೆ ಇಬ್ಬರು

ಡ್ರಾಮ ಜೂನಿಯರ್ ಸೀಸನ್ 4ರ ವಿಜೇತೆ ಸಮೃದ್ಧಿ ಎಸ್ ಮೊಗವೀರ್ Read More »

ಭೀಕರ ರಸ್ತೆ ಅಪಘಾತ; 15 ಮಂದಿ ಸಾವು, 20ಮಂದಿಗೆ ಗಾಯ

ಟರ್ಕಿ: ಕಾರಿನ ಅಪಘಾತ ನಡೆದ ವೇಳೆ ಅದಕ್ಕೆ ಪ್ರತಿಸ್ಪಂದಿಸುತ್ತಿದ್ದ ಜನರ ಮೇಲೆ ವೇಗವಾಗಿ ಬಂದ ಬಸ್ ನಿಯಂತ್ರಣಕ್ಕೆ ಬಾರದೇ ವಾಹನಗಳಿಗೆ ಡಿಕ್ಕಿ ಹೊಡೆದು ಜನರ ಮೇಲೆ ಹರಿದ ಘಟನೆಯೊಂದು ಆಗ್ನೇಯ ಟರ್ಕಿ ಗಾಜಿಯಾಂತೆಪ್ ನಗರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಗಾಜಿಯಾಂತೆಪ್ ಮತ್ತು ನಿಜಿಪ್ ನಡುವಿನ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿ ನಾಲ್ವರು ಗಾಯಗೊಂಡಿದ್ದರು. ಪೊಲೀಸ್ ಮತ್ತು ವೈದ್ಯರ ತಂಡ ಗಾಯಗೊಂಡವರನ್ನು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ಸಿದ್ದತೆಯಲ್ಲಿತ್ತು. ಘಟನೆಯ ವೇಳೆ ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದರು. ಈ ವೇಳೆ

ಭೀಕರ ರಸ್ತೆ ಅಪಘಾತ; 15 ಮಂದಿ ಸಾವು, 20ಮಂದಿಗೆ ಗಾಯ Read More »

ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ; ನಾಲ್ವರು ಸಾವು, 13 ಜನರ ಸ್ಥಿತಿ ಚಿಂತಾಜನಕ

ಲಖ್ನೋ – ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 13 ಜನರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಕಾರಿನಲ್ಲಿದ್ದ ಶಿವಾನಿ(18) ಮತ್ತು ಚಾಲಕ ಸಾರ್ಥಕ್ ಭಾರದ್ವಾಜ್(25) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಟ್ರಾಕ್ಟರ್‍ನ ಟ್ರಾಲಿಯೊಳಗೆ ಸಿಲುಕಿದ್ದ ಪ್ರಯಾಣಿಕರಾದ ಸಾವಿತ್ರಿ ದೇವಿ(50) ಮತ್ತು ಜ್ಞಾನವತಿ( 47) ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾವನ್ನಪ್ಪಿದ್ದಾರೆ. ರಾಜಧಾನಿ ಲಕ್ನೋದಿಂದ ಸುಮಾರು 700 ಕಿಮೀ ದೂರದಲ್ಲಿರುವ ಸಹರಾನ್‍ಪುರ ಜಿಲ್ಲೆಯ ದಿಯೋಬಂದ್ ಪ್ರದೇಶದಲ್ಲಿರುವ ರೋಹನಾ ಟೋಲ್ ಪ್ಲಾಜಾ ಬಳಿಯ ಮುಜಾಫರ್‍ನಗರ-ಸಹಾರನ್‍ಪುರ

ವೇಗವಾಗಿ ಬಂದ ಕಾರು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ; ನಾಲ್ವರು ಸಾವು, 13 ಜನರ ಸ್ಥಿತಿ ಚಿಂತಾಜನಕ Read More »

ಉಪ್ಪಿನಂಗಡಿ: ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಮಾಡಿದ ಯುವಕ ಪೊಲೀಸ್ ಠಾಣೆಗೆ| ರೀಚಾರ್ಜ್ ಮಾಡಿಸಿದ ಯುವತಿಯರಿಗೆ ಮೆಸೇಜ್..!

ಉಪ್ಪಿನಂಗಡಿ: ವಿದ್ಯಾರ್ಥಿನಿಯೋರ್ವಳಿಗೆ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಲ್ಲಿನ ಕರುವೇಲು ನಿವಾಸಿಯೊಬ್ಬ ಖಾಸಗಿ ಶಾಲೆಯ ವಿದ್ಯಾರ್ಥಿನಿಗೆ ಇನ್ ಸ್ಟ್ಯಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದು, ಇದನ್ನು ಈಕೆ ಹೆತ್ತವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಕಳುಹಿಸಲಾಗಿದೆ. ಏನಿದು ಆರೋಪ..?ಉಪ್ಪಿನಂಗಡಿಯ ಹೊಸ ಬಸ್‌ ನಿಲ್ದಾಣದಲ್ಲಿನ ಝನ್ ಟೆಲಿಕಾಂ ಮೊಬೈಲ್ ಅಂಗಡಿನಲ್ಲಿ ಕೆಲಸ ಮಾಡುವ

ಉಪ್ಪಿನಂಗಡಿ: ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಮಾಡಿದ ಯುವಕ ಪೊಲೀಸ್ ಠಾಣೆಗೆ| ರೀಚಾರ್ಜ್ ಮಾಡಿಸಿದ ಯುವತಿಯರಿಗೆ ಮೆಸೇಜ್..! Read More »

4 ವರ್ಷದ ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಎಚ್‌ಎಎಲ್‌ ಸಮೀಪದ ದೊಡ್ಡನೆಕ್ಕುಂದಿಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಗೃಹಿಣಿ ತನ್ನ ನಾಲ್ಕು ವರ್ಷದ ಮಗುವನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ನಡೆದಿದೆ. ಮೃತ ಮಗುವನ್ನು ಸಂಯುಕ್ತಾ (4) ಎಂದು ಗುರುತಿಸಲಾಗಿದ್ದು, ಕೊಲೆಗೈದು ನೇಣು ಬಿಗಿದುಕೊಂಡಿದ್ದ ಗಾಯತ್ರಿ ದೇವಿ (23) ಬದುಕುಳಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಯುಕ್ತ ಜೊತೆ ದೊಡ್ಡನೆಕ್ಕುಂದಿಯ ಅಪಾರ್ಟ್‌ಮೆಂಟ್‌ನಲ್ಲಿ ತಮಿಳುನಾಡು ಮೂಲದ ನರೇಂದ್ರ ಹಾಗೂ ಗಾಯತ್ರಿ ದೇವಿ ದಂಪತಿ, ಮಗು ವಾಸವಾಗಿದ್ದು, ಕೆಲಸದ ನಿಮಿತ್ತ ಪತಿ ನರೇಂದ್ರ ಭಾನುವಾರ

4 ವರ್ಷದ ಮಗುವನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ತಾಯಿ ಆತ್ಮಹತ್ಯೆಗೆ ಯತ್ನ Read More »

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ

ಅದಾನಿ ಏರ್​ಪೋರ್ಟ್ಸ್​ ಒಡೆತನದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (ಎಂಐಎ) ದೇಶೀಯ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು ತಕ್ಷಣವೇ 100 ರೂಪಾಯಿ ಹೆಚ್ಚಿಸುವಂತೆ ಸರ್ಕಾರವನ್ನು ಕೋರಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರವು ಶುಲ್ಕ ನಿಗದಿ ಮಾಡುವ ಸಂಸ್ಥೆಯಾಗಿದ್ದು, ಮಂಗಳೂರು ವಿಮಾನ ನಿಲ್ದಾಣದ ಶುಲ್ಕ ನಿಗದಿಪಡಿಸುವ ಪ್ರಕ್ರಿಯೆಯಲ್ಲಿದೆ. ಈ ಅಕ್ಟೋಬರ್​ನಿಂದ ದೇಶೀಯ ಪ್ರಯಾಣಿಕರಿಗೆ 250 ರೂಪಾಯಿಗಳ ಶುಲ್ಕ ವಿಧಿಸಲು ಪ್ರಯತ್ನಿಸಿದೆ ಅದಾನಿ ಗ್ರೂಪ್​ ಅಕ್ಟೋಬರ್​ 31, 2020ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ವಹಿಸಿಕೊಂಡಿದೆ. ರನ್​ವೇಯ

ಮಂಗಳೂರಿನಿಂದ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಶಾಕಿಂಕ್ ಸುದ್ದಿ Read More »

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ! ಇಲ್ಲಿದೆ ಸಂಪೂರ್ಣ ವಿವರ

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಮಾದರಿಯಲ್ಲೇ ಕೆಪಿಟಿಸಿಎಲ್ ಪರೀಕ್ಷೆಯಲ್ಲೂ ಅಕ್ರಮ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಅಪ್ಪ ಮಗ ಸೇರಿದಂತೆ 9 ಜನರನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್, ಹುಕ್ಕೇರಿ, ಅಥಣಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿದೆ. ಸ್ಮಾರ್ಟ್‌ವಾಚ್‌ ಹಾಗೂ ಬ್ಲೂ ಟೂತ್ ಡಿವೈಸ್ ಬಳಸಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದಾರೆ. ಉಪಪ್ರಾಚಾರ್ಯ ಹಾಗೂ ಪರೀಕ್ಷಾ ಮೇಲ್ವಿಚಾರಕರೂ ಆಗಿದ್ದ ಮಾರುತಿ ಸೋನವಣಿ ಅವರ ಪುತ್ರ

ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ! ಇಲ್ಲಿದೆ ಸಂಪೂರ್ಣ ವಿವರ Read More »

ಬಿಜೆಪಿ ನಾಯಕಿ, ನಟಿ ಸೊನಾಲಿ ಪೋಗಟ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಗೋವಾದಲ್ಲಿ ನಿನ್ನೆ ರಾತ್ರಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಅವರು ತಮ್ಮ ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಸೋನಾಲಿ ಫೋಗಟ್ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡರು. ಅವರು ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದರು. ನಂತರ ಅವರು ಅಪಾರ ಜನಪ್ರಿಯತೆಯನ್ನು ಗಳಿಸಿದರು. ಸೋನಾಲಿ ಫೋಗಟ್ ಕೂಡ ಬಿಜೆಪಿ ನಾಯಕಿಯಾಗಿದ್ದರು. ಅವರು 2019 ರ ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ನಲ್ಲಿ ಆದಂಪುರದಿಂದ ವಿಧಾನಸಭಾ ಚುನಾವಣೆಯಲ್ಲಿ

ಬಿಜೆಪಿ ನಾಯಕಿ, ನಟಿ ಸೊನಾಲಿ ಪೋಗಟ್ ಹೃದಯಾಘಾತದಿಂದ ಸಾವು Read More »