August 2022

ಕರ್ನಾಟಕದಲ್ಲಿ ಮತ್ತೊಂದು ಹೊಸ ಜಿಲ್ಲೆಯ ಉದಯ| ಶೀಘ್ರದಲ್ಲೇ ಜಿಲ್ಲಾಕೇಂದ್ರವಾಗಿ ದೇವನಹಳ್ಳಿ

ಸಮಗ್ರ ನ್ಯೂಸ್: ಇನ್ನೊಂದು ತಿಂಗಳೊಳಗೆ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯ ದೇವನಹಳ್ಳಿಯು ನಾಡಪ್ರಭು ಕೆಂಪೇಗೌಡರು ಆಡಳಿತ ನಡೆಸಿದ ಪ್ರದೇಶವಾಗಿದೆ. ಕೇಂಪೇಗೌಡರ ಆಡಳಿತದ ನಾಡಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿರುವುದು ಹೆಮ್ಮೆ ತಂದಿದ್ದು, ಇಂತಹ ದೇವನಹಳ್ಳಿ ಪ್ರದೇಶವನ್ನು ಜಿಲ್ಲಾ ಕೇಂದ್ರವಾಗಿಸಲು ಒಂದು ತಿಂಗಳೊಳಗೆ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು. ಸ್ವಾತಂತ್ರ್ಯದ […]

ಕರ್ನಾಟಕದಲ್ಲಿ ಮತ್ತೊಂದು ಹೊಸ ಜಿಲ್ಲೆಯ ಉದಯ| ಶೀಘ್ರದಲ್ಲೇ ಜಿಲ್ಲಾಕೇಂದ್ರವಾಗಿ ದೇವನಹಳ್ಳಿ Read More »

‘ಹಲೋ’ ಬದಲಿಗೆ ಸರ್ಕಾರಿ ಅಧಿಕಾರಿಗಳು ‘ವಂದೇ ಮಾತರಂ’ ಹೇಳಿ| ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಹೊಸ ಆದೇಶ ನೀಡಿದ “ಮಹಾ” ಸರ್ಕಾರ

ಸಮಗ್ರ ನ್ಯೂಸ್: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ವೇಳೆ, ಇಂಗ್ಲಿಷರ ಹಲೋ ಯಾಕೆ? ಅದರ ಬದಲು ಇನ್ಮುಂದೆ ಹಲೋ ಬದಲು ವಂದೇ ಮಾತರಂ ಹೇಳಿ.. ಹೀಗೆಂದು ಮಹಾರಾಷ್ಟ್ರ ಸರ್ಕಾರ ಸೂಚನೆ ನೀಡಿದೆ. ನಿನ್ನೆಯಷ್ಟೇ ಮಹಾರಾಷ್ಟ್ರ ಸರ್ಕಾರದ ನೂತನ ಸಚಿವ ಸಂಪುಟ ರಚನೆಯಾಗಿದ್ದು, ಸಾಂಸ್ಕೃತಿಕ ವ್ಯವಹಾರಗಳ ಸಚಿವರಾಗಿ ನೇಮಕಗೊಂಡ ಸುಧೀರ್ ಮುಂಗಂತಿವಾರ್ ಇಂಥದ್ದೊಂದು ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಕಚೇರಿಗಳಲ್ಲಿ ಫೋನ್ ಕರೆಗಳನ್ನು ತೆಗೆದುಕೊಳ್ಳುವಾಗ ‘ಹಲೋ’ ಬದಲಿಗೆ ‘ವಂದೇ ಮಾತರಂ’ ಎಂದು ಹೇಳಿ

‘ಹಲೋ’ ಬದಲಿಗೆ ಸರ್ಕಾರಿ ಅಧಿಕಾರಿಗಳು ‘ವಂದೇ ಮಾತರಂ’ ಹೇಳಿ| ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿ ಹೊಸ ಆದೇಶ ನೀಡಿದ “ಮಹಾ” ಸರ್ಕಾರ Read More »

ಕಾಶ್ಮೀರದ ಲಾಲ್ ಚೌಕ್ ನಲ್ಲೂ ಕೇಳಿ ಬಂತು ವಂದೇ ಮಾತರಂ| ಧ್ವಜಾರೋಹಣ ನಡೆಸಿ ನೃತ್ಯ ಮಾಡಿದ ಮಮತಾ ಬ್ಯಾನರ್ಜಿ

ಸಮಗ್ರ ನ್ಯೂಸ್: ದೇಶದಲ್ಲಿ ಸ್ವಾತಂತ್ರ್ಯ ಸಂಭ್ರಮವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿದೆ. ಕಾಶ್ಮೀರಿಂದ ಕನ್ಯಾಕುಮಾರಿಯವರೆಗೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದು, 75 ವರ್ಷಗಳ ಸ್ವಾತಂತ್ರ್ಯ ಸಂಭ್ರಮಕ್ಕೆ ಇನ್ನಷ್ಟು ಮೆರಗು ಸಿಕ್ಕಿದೆ. ಕೆಂಪುಕೋಟೆಯ ಆವರಣದಲ್ಲಿ ಪ್ರಧಾನಿ ರಾಷ್ಟ್ರಧ್ವಜ ಹಾರಿಸಿದ ಬಳಿಕ, ವಿವಿಧ ರಾಜ್ಯಗಳ ರಾಜಧಾನಿಗಳಲ್ಲಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳು ಧ್ವಜ ಹಾರಿಸಿದರು. ಈವರೆಗೂ ಗಲಾಟೆಯಿಂದಲೇ ಸುದ್ದಿಯಾಗುತ್ತಿದ್ದ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿರುವ ಲಾಲ್‌ ಚೌಕದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಬಳಿಕ, ವಂದೇ ಮಾತರಂ ಹಾಗೂ ಭಾರತ್‌ ಮಾತಾ ಕಿ ಜೈ ಎಂದು

ಕಾಶ್ಮೀರದ ಲಾಲ್ ಚೌಕ್ ನಲ್ಲೂ ಕೇಳಿ ಬಂತು ವಂದೇ ಮಾತರಂ| ಧ್ವಜಾರೋಹಣ ನಡೆಸಿ ನೃತ್ಯ ಮಾಡಿದ ಮಮತಾ ಬ್ಯಾನರ್ಜಿ Read More »

ಹೊತ್ತಿಕೊಂಡ ಪ್ಲೆಕ್ಸ್ ತೆರವು ವಿವಾದದ ಕಿಚ್ಚು| ಶಿವಮೊಗ್ಗ ಭದ್ರಾವತಿ ನಗರ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಸಾವರ್ಕರ್ ಫ್ಲೆಕ್ಸ್ ತೆರವು ವಿಚಾರಕ್ಕೆ ಘರ್ಷಣೆ ಉಂಟಾದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ, ಭದ್ರಾವತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಆ.16ರಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದಾರೆ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಜೊತೆಗೆ ಶಿವಮೊಗ್ಗ ‌ಮತ್ತು ಭದ್ರಾವತಿ ನಗರಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಹೊತ್ತಿಕೊಂಡ ಪ್ಲೆಕ್ಸ್ ತೆರವು ವಿವಾದದ ಕಿಚ್ಚು| ಶಿವಮೊಗ್ಗ ಭದ್ರಾವತಿ ನಗರ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ Read More »

ಮನೆಯ ಮೇಲೆ ತಿರಂಗಾ ಹಾರಿಸಿದ್ದೀರಾ? “ಹರ್ ಘರ್ ತಿರಂಗಾ” ಪ್ರಮಾಣ ಪತ್ರ ಡೌನ್ ಲೋಡ್ ಮಾಡ್ಕೊಳ್ಳಿ…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದಂತೆ ದೇಶದಾದ್ಯಂತ ಮನೆ ಮನೆ ತ್ರಿವರ್ಣ ಧ್ವಜ ಹಾರಿಸಿ, ಜನತೆ ಸಂಭ್ರಮಿಸಿದ್ದಾರೆ. ದೇಶದ ಜನತೆಗೆ ತ್ರಿವರ್ಣ ಧ್ವಜಾರೋಹಣದ ಮಹತ್ವ ತಿಳಿಸಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಯಶಸ್ವಿಯಾಗಿದೆ. ಹರ್ ಘರ್ ತಿರಂಗಾ ಹೆಸರಿನ ಅಭಿಯಾನವನ್ನು ಆಗಸ್ಟ್ 13 ರಿಂದ 15ರ ತನಕ ಅಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಜಾರಿಗೊಳಿಸಲಾಗಿತ್ತು. ದೇಶದ 75 ನೇ ಸ್ವಾತಂತ್ರ್ಯದ ವಾರ್ಷಿಕೋತ್ಸವವನ್ನು ಗುರುತಿಸಲು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿತ್ತು.

ಮನೆಯ ಮೇಲೆ ತಿರಂಗಾ ಹಾರಿಸಿದ್ದೀರಾ? “ಹರ್ ಘರ್ ತಿರಂಗಾ” ಪ್ರಮಾಣ ಪತ್ರ ಡೌನ್ ಲೋಡ್ ಮಾಡ್ಕೊಳ್ಳಿ… Read More »

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದ್ದಾರೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿ ಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಸೇರಿದಂತೆ ಇತರ ಕುಶಲಕರ್ಮಿಗಳಿಗೆ ತಲಾ 50 ಸಾವಿರ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಘೋಷಿಸಿದ ಸಿಎಂ ಬೊಮ್ಮಾಯಿ Read More »

ಗೃಹ ಸಚಿವರ ಬೆಂಗಾವಲು ವಾಹನ ಅಪಘಾತ!

ಗೃಹ ಸಚಿವ ಆರಗ ಜ್ಞಾನೇಂದ್ರರ ಬೆಂಗಾವಲು ವಾಹನ ಅಪಘಾತವಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಜಂಕ್ಷನ್​​ನಲ್ಲಿ ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜಂಕ್ಷನ್ ಬಳಿಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನಕ್ಕೆ, ಮತ್ತೊಂದು ಕಾರು ಡಿಕ್ಕಿಯಾಗಿದೆ. ಈ ಪರಿಣಾಮ, ಬೆಂಗಾವಲು ವಾಹನ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ತುಮಕೂರಿನಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದರು. ಈ ವೇಳೆಯಲ್ಲಿ ಎದುರುಗಡೆ ಬರುತ್ತಿದ್ದಂತ ಕಾರೊಂದು

ಗೃಹ ಸಚಿವರ ಬೆಂಗಾವಲು ವಾಹನ ಅಪಘಾತ! Read More »

ಶಿವಮೊಗ್ಗದಲ್ಲಿ ಭುಗಿಲೆದ್ದ ಪ್ಲೆಕ್ಸ್ ತೆರವು ವಿವಾದ।ಹಿಂದೂ ಯುವಕನಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಫ್ಲೆಕ್ಸ್ ತೆರವು ವಿವಾದ ಭುಗಿಲೆದ್ದಿದೆ. ಈ ಕಾರಣದಿಂದಾಗಿಯೇ ಇಂದಿನಿಂದ ಮೂರು ದಿನ ನಗರದಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಮತ್ತೊಂದೆಡೆ ನಗರದ ಉಪ್ಪಾರಕೇರಿಯಲ್ಲಿ 20 ವರ್ಷದ ಪ್ರೇಮ್ ಸಿಂಗ್ ಎಂಬಾತನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿಯಲಾಗಿದೆ. ಅವರನ್ನು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ಇರಿತಕ್ಕೊಳಗಾದ ಯುವಕನನ್ನು ಪ್ರೇಮ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರೇಮ್

ಶಿವಮೊಗ್ಗದಲ್ಲಿ ಭುಗಿಲೆದ್ದ ಪ್ಲೆಕ್ಸ್ ತೆರವು ವಿವಾದ।ಹಿಂದೂ ಯುವಕನಿಗೆ ಚೂರಿ ಇರಿತ Read More »

ಅಮೃತ ಮಹೋತ್ಸವದ ಸಂದರ್ಭದಲ್ಲಿ 9 ಕೇಂದ್ರ ಕಾರಾಗೃಹ ದಿಂದ 81 ಕೈದಿಗಳ ಬಿಡುಗಡೆ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಹಿನ್ನೆಲೆ ರಾಜ್ಯದ 9 ಕೇಂದ್ರ ಕಾರಾಗೃಹಗಳಲ್ಲಿ ಅಲ್ಪಾವಧಿ ಶಿಕ್ಷಾ ಬಂಧಿಗಳಿಗಾಗಿರುವ ಮೂವರು ಮಹಿಳೆಯರು ಸೇರಿ 81 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಸೋಮವಾರ ಜೈಲುಗಳಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಬಳಿಕ ಕೈದಿಗಳಿಗೆ ಬಿಡುಗಡೆ ಪ್ರಮಾಣ ಪತ್ರ ನೀಡಿ ಕಳುಹಿಸಲಾಗುತ್ತದೆ ಎಂದು ಕಾರಾಗೃಹ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು 14, ಬೆಳಗಾವಿ 3, ಬಳ್ಳಾರಿ 8, ವಿಜಯಪುರ ಇಬ್ಬರು ಮಹಿಳೆಯರು ಸೇರಿ 10, ಧಾರವಾಡ 6, ಕಲಬುರಗಿ 10, ಮೈಸೂರು 20, ಶಿವಮೊಗ್ಗ

ಅಮೃತ ಮಹೋತ್ಸವದ ಸಂದರ್ಭದಲ್ಲಿ 9 ಕೇಂದ್ರ ಕಾರಾಗೃಹ ದಿಂದ 81 ಕೈದಿಗಳ ಬಿಡುಗಡೆ Read More »

ಕಡಬ; ದ್ವಜಾರೋಹಣದ ವೇಳೆ ಕುಸಿದು ಬಿದ್ದು, ನಿವೃತ್ತ ಸೈನಿಕ ಮೃತ್ಯು

ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ನಿವೃತ್ತ ಸೈನಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆಯೊಂದು ಕಡಬದಲ್ಲಿ ನಡೆದಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಡಬ; ದ್ವಜಾರೋಹಣದ ವೇಳೆ ಕುಸಿದು ಬಿದ್ದು, ನಿವೃತ್ತ ಸೈನಿಕ ಮೃತ್ಯು Read More »