ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ನೇಣಿಗೆ ಶರಣು
ಬೆಂಗಳೂರು: ಬಿಎಂಟಿಸಿ ಚಾಲಕ ನೇಣಿಗೆ ಶರಣಾದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ರಾಜರಾಜೇಶ್ವರಿ ನಗರ ಬಸ್ ಡಿಪೋ 21 ರ ಬಿಎಂಟಿಸಿ ಬಸ್ ಚಾಲಕ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆಯೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅನೇಕ ಬಿಎಂಟಿಸಿ ನೌಕರರು ಸಾವಿಗೆ ಶರಣಾಗಿದ್ದರು. ಅದರಂತೆ ಹೊಳೆಬಸಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ತಿಂಗಳ ಕಳೆದ 21 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ನೇಣಿಗೆ ಶರಣು Read More »









