August 2022

ಮಂಗಳೂರು: ವಿದ್ಯಾರ್ಥಿಗಳ ಕೈಲಿದ್ದ ರಾಖಿ ತೆಗೆದು ಕಸದಬುಟ್ಟಿಗೆ ಎಸೆದ ಶಿಕ್ಷಕರು

ಸಮಗ್ರ ನ್ಯೂಸ್: ಮಕ್ಕಳ ಕೈಯ್ಯಲ್ಲಿದ್ದ ರಕ್ಷಾ ಬಂಧನದ ರಾಖಿ ಕಿತ್ತೆಸೆದ ಆರೋಪದ ಹಿನ್ನೆಲೆ ಪೋಷಕರು‌ ಮತ್ತು ಬಿಜೆಪಿ ಕಾರ್ಯಕರ್ತರಿಂದ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿರುವ ಘಟನೆ ಮಂಗಳೂರು ಹೊರವಲಯದ ಕಾಟಿಪಳ್ಳದ ಖಾಸಗಿ ಶಾಲೆಯಲ್ಲಿ ನಡೆದಿದೆ. ಕಾಟಿಪಳ್ಳದ ಇನ್ಫೆಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಿನ್ನೆ ‌ರಕ್ಷಾಬಂಧನ ಹಿನ್ನೆಲೆ ಕೈಗೆ ರಾಖಿ ಕಟ್ಟಿಕೊಂಡು ಮಕ್ಕಳು ಹೋಗಿದ್ದರು, ಆದರೆ ರಾಖಿ ತೆಗೆಸಿ ಕೆಲ ಶಿಕ್ಷಕರು ಕಸದ ಬುಟ್ಟಿಗೆ ಎಸೆದಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ. ಈ ಹಿನ್ನೆಲೆ ಶಾಲೆಗೆ […]

ಮಂಗಳೂರು: ವಿದ್ಯಾರ್ಥಿಗಳ ಕೈಲಿದ್ದ ರಾಖಿ ತೆಗೆದು ಕಸದಬುಟ್ಟಿಗೆ ಎಸೆದ ಶಿಕ್ಷಕರು Read More »

ಮಂಗಳೂರು:ಹಿಟ್ ಆಂಡ್ ರನ್, ಯುವಕ ಸಾವು

ಸಮಗ್ರ ನ್ಯೂಸ್: ಅಪರಿಚಿತ ವಾಹನವೊಂದು ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನಮೊಗರು ಬಳಿ ನಡೆದಿದೆ. ಬಿಹಾರ ಮೂಲದ ವಿಕ್ಕಿ ಖಾನ್ (23)ಮೃತ ಕಾರ್ಮಿಕ. ಘಟನೆಯಲ್ಲಿ ಗೋಪಾಲ್ ಪೂಜಾರಿ ಎಂಬವರು ಗಾಯಗೊಂಡಿದ್ದಾರೆ‌. ಇವರು ಹೆದ್ದಾರಿ ಬಳಿ ಬೆಳಿಗ್ಗೆ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ.ಪಿಕಪ್ ವಾಹನದ ಮೇಲೆ ಸಂಶಯ ವ್ಯಕ್ತಪಡಿಸಿರುವ ಪೊಲೀಸರು

ಮಂಗಳೂರು:ಹಿಟ್ ಆಂಡ್ ರನ್, ಯುವಕ ಸಾವು Read More »

ದಕ್ಷಿಣ ಕನ್ನಡ: ಹವಾಮಾನ ವರದಿ ಹಾಗೂ ಮುನ್ಸೂಚನೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಈ ಹಿಂದೆ ಘೋಷಿಸಿದ್ದ ಯೆಲ್ಲೋ ಅಲರ್ಟ್ ಶುಕ್ರವಾರ ಆರೆಂಜ್‌ಗೆ ಬದಲಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಗಾಳಿ ಬಲವಾಗಿ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ನೀಡಲಾಗಿರುವ ಎಚ್ಚರಿಕೆಯನ್ನು ಮುಂದುವರಿಸಲಾಗಿದೆ. ಗುರುವಾರ ಮಳೆ ಕಡಿಮೆಯಾಗಿದ್ದರೂ ಬಲವಾಗಿ ಬೀಸುವ ಗಾಳಿಯಿಂದಾಗಿ ಸಮುದ್ರದ ಪ್ರಕ್ಷುಬ್ಧತೆ ಮುಂದುವರಿಸಿದೆ.  ದ.ಕ.ಜಿಲ್ಲೆಯಲ್ಲಿ ಗುರುವಾರ ಸಾಧಾರಣ ಮಳೆಯೊಂದಿಗೆ ಬಿಸಿಲ ವಾತಾವರಣವಿತ್ತು.

ದಕ್ಷಿಣ ಕನ್ನಡ: ಹವಾಮಾನ ವರದಿ ಹಾಗೂ ಮುನ್ಸೂಚನೆ Read More »

ನೆಲ್ಯಾಡಿ: ಬಸ್ ನಲ್ಲಿ ಸಿಕ್ಕಿಬಿದ್ದ ಅನ್ಯಮತೀಯ ನವಜೋಡಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಅನ್ಯ ಜೋಡಿಯೊಂದನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು(ಆ.12) ಮುಂಜಾನೆ ಬೆಳಕಿಗೆ ಬಂದಿದೆ. ಗದಗ ಜಿಲ್ಲೆಯ ನರಗುಂದ ಮೂಲದ ರಫೀಕ್ (21) ಸಂಕದಲ್ ಎಂಬಾತ ಗದಗ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು ಖಾಸಗಿ ಲಾಡ್ಜ್ ಬುಕ್ಕಿಂಗ್ ಗಾಗಿ ಬಂದಿರುತ್ತಾರೆ. ನವ ವಿವಾಹಿತ ಭಿನ್ನಕೋಮಿನ ಜೋಡಿ ಎಂದು ತಿಳಿದ ಕೂಡಲೆ ಲಾಡ್ಜ್ ಸಿಬ್ಬಂದಿ, ರೂಮ್ ನೀಡಲು ನಿರಾಕರಿಸಿದ್ದಾರೆ. ಆಗ ಅವರು ತಕ್ಷಣ ಅಲ್ಲಿಂದ ಮರಳಿ

ನೆಲ್ಯಾಡಿ: ಬಸ್ ನಲ್ಲಿ ಸಿಕ್ಕಿಬಿದ್ದ ಅನ್ಯಮತೀಯ ನವಜೋಡಿ ಪೊಲೀಸ್ ವಶಕ್ಕೆ Read More »

ದಂಪತಿಗಳ ಜಗಳ ಬಿಡಿಸಲು ಮಧ್ಯೆ ಹೋದ ವ್ಯಕ್ತಿಯ ಭೀಕರ ಹತ್ಯೆ

ವಿಜಯಪುರ: ಗಂಡ ಹೆಂಡತಿಯ ಜಗಳ ಬಿಡಿಸಲು ಮಧ್ಯ ಬಂದವನೇ ಭೀಕರವಾಗಿ ಕೊಲೆಯಾದ ಘಟನೆಯೊಂದು ಜಿಲ್ಲೆಯ ಗುರುಪಾದೇಶ್ವರ ನಗರದಲ್ಲಿ ನಡೆದಿದೆ. ಪರುಶರಾಮ ಅಬಟೇರಿ (30) ಮೃತಪಟ್ಟ ದುರ್ದೈವಿ. ಮೂಲತಃ ಬಾಗಲಕೋಟೆ ಜಿಲ್ಲೆಯ ಅಚನೂರು ಗ್ರಾಮದ ನಿವಾಸಿಯಾಗಿದ್ದ ಪರಶುರಾಮ ವಿಜಯಪುರದ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಕಳೆದ 15 ದಿನಗಳ ಹಿಂದೆ ಗುರುಪಾದೇಶ್ವರ ನಗರದ ಕೆಇಬಿ ನಿವೃತ್ತ ನೌಕರ ಈಜೇರಿ ಎಂಬವರ ಮನೆಯಲ್ಲಿ ಪತ್ನಿಯೊಂದಿಗೆ ಬಾಡಿಗೆಗೆ ವಾಸವಾಗಿದ್ದ, ಹಬ್ಬಕ್ಕಾಗಿ ಪತ್ನಿ ತವರಿಗೆ ಹೋಗಿದ್ದರು. ನಿನ್ನೆ ಸಂಜೆ 4:30ರ ವೇಳೆಗೆ ಮನೆಯ ಮಾಲೀಕನ

ದಂಪತಿಗಳ ಜಗಳ ಬಿಡಿಸಲು ಮಧ್ಯೆ ಹೋದ ವ್ಯಕ್ತಿಯ ಭೀಕರ ಹತ್ಯೆ Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

ಬೆಂಗಳೂರು: 2022ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಆ.12ರಿಂದ 25ರ ವರೆಗೆ ರಾಜ್ಯಾದ್ಯಂತ 307 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಪ್ರಸಕ್ತ ಸಾಲಿನ ಏಪ್ರಿಲ್‌/ಮೇ ತಿಂಗಳಿನಲ್ಲಿ ನಡೆದ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ 1,85,449 ಅಭ್ಯರ್ಥಿಗಳು ಪರೀಕ್ಷೆ ನೋಂದಣಿ ಮಾಡಿಕೊಂಡಿದ್ದು, ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಶುಕ್ರವಾರ ಮೊದಲ ದಿನ ಪ್ರಥಮ ಭಾಷೆ ಕನ್ನಡ ಮತ್ತು ಅರೇಬಿಕ್‌ ಪರೀಕ್ಷೆ ನಡೆಯಲಿವೆ ಎಂದು ಪಿಯು ಇಲಾಖೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ Read More »

ಬಿಜೆಪಿ ನಂಬಿದ ಪರೇಶ್ ಮೇಸ್ತಾ ಕುಟುಂಬಕ್ಕೆ ಶಾಕ್| ಕೊಲೆ ಪ್ರಮುಖ ಆರೋಪಿಗೆ ಸಿಕ್ತು ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ!

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಪರೇಶ್ ಮೇಸ್ತಾ ಕೊಲೆ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಕೊಲೆ ಹಿಂದೆ ಅನ್ಯ ಕೋಮಿನ ಕೈವಾಡವಿದೆ ಅಂತಾ ಅನುಮಾನಿಸಲಾಗಿತ್ತು. ಹೀಗಾಗಿ ಯುವಕನ ಸಾವಿಗೆ ನ್ಯಾಯ ಸಿಗಬೇಕು ಮತ್ತು ಕೊಲೆ ಮಾಡಿದವರಿಗೆ ಸೂಕ್ತ ರೀತಿಯಲ್ಲಿ ಕ್ರಮ ಆಗಬೇಕು ಅಂತಾ ಅಂದಿನ ಸರ್ಕಾರದ ವಿರುದ್ದ ಜಿಲ್ಲೆಯಲ್ಲಿ ಬೆಂಕಿ ಜ್ವಾಲೆಯೇ ಹತ್ತಿತ್ತು. ಆಗಿನ ಸಿದ್ದರಾಮಯ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನ ಸಿಬಿಐ ಗೆ ಒಪ್ಪಿಸಿತ್ತು. ಆದರೆ ಅಂದು ಒಂದನೇ ಆರೋಪಿಯಾಗಿದ್ದ ಆಜಾದಿ

ಬಿಜೆಪಿ ನಂಬಿದ ಪರೇಶ್ ಮೇಸ್ತಾ ಕುಟುಂಬಕ್ಕೆ ಶಾಕ್| ಕೊಲೆ ಪ್ರಮುಖ ಆರೋಪಿಗೆ ಸಿಕ್ತು ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ! Read More »

ಹುಡುಗಿಯರು ಲೈಂಗಿಕ ಸಂಪರ್ಕ ಬಯಸಿದರೆ ಎಚ್ಚರದಿಂದಿರಿ| ನಟ ಮುಖೇಶ್ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಇದು ಸೋಷಿಯಲ್ ಮೀಡಿಯಾ ಯುಗ. ಇಲ್ಲಿ ಯಾರು ಯಾವಾಗ ಬೇಕಾದ್ರು ಖ್ಯಾತಿ ಘಳಿಸಬಹುದು, ಯಾವಾಗ ಬೇಕಾದ್ರು ಅಪಖ್ಯಾತಿ ಘಳಿಸ ಬಹುದು. ಸಾಮಾಜಿಕ ಜಾಲಾ ತಾಣದ ಮೂಲಕ ಹುಡುಗಿಯರ ವಿಚಾರದಲ್ಲಿ ಹುಡುಗರು ಎಚ್ಚರಿಕೆಯಿಂದ ಇರಬೇಕು ಎಂದು ಶಕ್ತಿಮಾನ್ ಖ್ಯಾತಿ ಮುಖೇಶ್ ಎಚ್ಚರಿಕೆ ನೀಡಿದ್ದಾರೆ. ಇನ್​ಸ್ಟಾಗ್ರಾಂ, ಫೇಸ್​ಬುಕ್​ನಲ್ಲಿ ಹಲವು ಖಾತೆಗಳು ಹುಟ್ಟಿಕೊಂಡಿವೆ. ಈ ಖಾತೆಗಳಲ್ಲಿ ಹುಡುಗಿಯರ ಫೋಟೋಗಳನ್ನು ಹಾಕಲಾಗಿರುತ್ತದೆ. ಅವರ ಬೆತ್ತಲೆ ದೇಹ ನೋಡಬೇಕು ಎಂದರೆ ಹಣ ಕಳುಹಿಸುವಂತೆ ಬರೆಯಲಾಗಿರುತ್ತದೆ. ಅಂತಹ ಜನರನ್ನು ನಂಬಲೇಬಾರದು ಎಂಬುದು ಮುಕೇಶ್

ಹುಡುಗಿಯರು ಲೈಂಗಿಕ ಸಂಪರ್ಕ ಬಯಸಿದರೆ ಎಚ್ಚರದಿಂದಿರಿ| ನಟ ಮುಖೇಶ್ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ Read More »

ಮಡಿಕೇರಿ-ಮಂಗಳೂರು ಹೆದ್ದಾರಿ ರಾತ್ರಿ ಸಂಚಾರ ನಿರ್ಬಂಧ ತೆರವು

ಸಮಗ್ರ ನ್ಯೂಸ್: ಮಂಗಳೂರು- ಮಡಿಕೇರಿ ರಸ್ತೆಯಲ್ಲಿ ಮದೆನಾಡು ಸಮೀಪ ಬಿರುಕು ಬಿಟ್ಟಿದ್ದ ಗುಡ್ಡದಿಂದಾಗಿ ರಾತ್ರಿ ಸಂಚಾರ ನಿಷೇಧಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ವಾಪಸ್ ಪಡೆದಿದ್ದಾರೆ. ಸದ್ಯ, ಬಿರುಕು ಬಿಟ್ಟಿದ್ದ ಗುಡ್ಡದಿಂದ ಕುಸಿದಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯ ಶೇ 75ರಷ್ಟು ಪೂರ್ಣಗೊಂಡಿದೆ. ಉಳಿಕೆ ಮಣ್ಣಿನ ತೆರವು ಕಾರ್ಯವು ಬಿರುಸಿನಿಂದ ನಡೆಯುತ್ತಿದೆ. ಹಾಗಾಗಿ, ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಮಡಿಕೇರಿ-ಮಂಗಳೂರು ಹೆದ್ದಾರಿ ರಾತ್ರಿ ಸಂಚಾರ ನಿರ್ಬಂಧ ತೆರವು Read More »

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣನವರು ಹೃದಯಾಘಾತದಿಂದಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ. ಸುಬ್ಬಣ್ಣ ಅವರು ಶಿವಮೊಗ್ಗ ಜಿಲ್ಲೆಯ ನಗರ ಎಂಬ ಸಣ್ಣ ಊರಿನಲ್ಲಿ 1938ರ ಡಿ.14ರಂದು ಜನಿಸಿದರು.ಅವರಿಗೆ ಈಗ 83 ವಯಸ್ಸಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 1979ರಲ್ಲಿ ಕಾಡುಕುದುರೆ ಚಲನ ಚಿತ್ರದಲ್ಲಿ ಅವರು ಹಾಡಿದ ಕಾಡು ಕುದುರೆ ಓಡಿ ಬಂದಿತ್ತಾ ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ‘ರಜತ ಕಮಲ ರಾಷ್ಟ್ರ ಪ್ರಶಸ್ತಿ’ ಪಡೆದಿದ್ದರು. 1985ರಲ್ಲಿ ರಾಜ್ಯೋತ್ಸವ ಪುರಸ್ಕಾರ,

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ Read More »