ಬಿಹಾರ: ಬಿಜೆಪಿ- ಜೆಡಿಯು ಮೈತ್ರಿ ಅಂತ್ಯ| ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ
ಸಮಗ್ರ ನ್ಯೂಸ್: ಬಿಹಾರದಲ್ಲಿ ಬಿಜೆಪಿ- ಜೆಡಿಯು ಮೈತ್ರಿ ಅಂತ್ಯಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿರುವ ನಿತೀಶ್ ಕುಮಾರ್ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿರುವ ಜೆಡಿಯು ಅಧ್ಯಕ್ಷ ಹಾಗೂ ಸಿಎಂ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ನಿತೀಶ್ ಕುಮಾರ್ ಅವರ ನಿರ್ಧಾರದಿಂದಾಗಿ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನವಾಗಿದೆ.
ಬಿಹಾರ: ಬಿಜೆಪಿ- ಜೆಡಿಯು ಮೈತ್ರಿ ಅಂತ್ಯ| ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ Read More »