August 2022

ಕಾಮನ್‌ವೆಲ್ತ್; ಭಾರತಕ್ಕೆ ಮತ್ತೊಂದು ಚಿನ್ನ

ಸಮಗ್ರ ನ್ಯೂಸ್: ಕಾಮನ್‌ವೆಲ್ತ್ ಗೇಮ್ಸ್ 2022 ರ ಕ್ರೀಡಾಕೂಟದಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಲಕ್ಷ್ಯ ಸೇನ್ 19-21 21-9 21-16 ರಲ್ಲಿ ಮಲೇಷ್ಯಾದ ಎನ್‌ಜಿ ತ್ಸೆ ಯೋಂಗ್ ಅವರನ್ನು ಸೋಲಿಸಿ ಪುರುಷರ ಸಿಂಗಲ್ಸ್ ಚಿನ್ನ ಗೆದ್ದಿದ್ದಾರೆ.ಈ ಮೂಲಕ ಭಾರತಕ್ಕೆ ಇದು 20 ನೇ ಚಿನ್ನದ ಪದಕವಾಗಿದೆ.

ಕಾಮನ್‌ವೆಲ್ತ್; ಭಾರತಕ್ಕೆ ಮತ್ತೊಂದು ಚಿನ್ನ Read More »

ಈ ಗ್ರಾಮದಲ್ಲಿ ಬೆಕ್ಕು ಅಪಶಕುನವಲ್ಲ| ಇಲ್ಲಿದೆ ಮಾರ್ಜಾಲಕ್ಕೊಂದು ಆಲಯ !

ಸಮಗ್ರ ನ್ಯೂಸ್: ಹಲವರು ಬೆಕ್ಕನ್ನು ಮನೆ ಸದಸ್ಯನಂತೆ ಸಾಕಿ ಸಲುಹುತ್ತಾರೆ. ಆದ್ರೆ ಕೆಲವರಿಗೆ ಈ ಬೆಕ್ಕು ಅಪಶಕುನ. ಆದರೆ ಮಂಡ್ಯದ ಬೆಕ್ಕಳೆಲೆ ಗ್ರಾಮದಲ್ಲಿ ಬೆಕ್ಕಿಗೆ ವಿಶೇಷ ಸ್ಥಾನ ನೀಡಲಾಗಿದೆ. ಮಾರ್ಜಾಲಕ್ಕೆ ದೇವಾಲಯವನ್ನು ಕಟ್ಟಿ ಭಕ್ತಿ ಭಾವದಿಂದ ಪೂಜೆ ಮಾಡಲಾಗುತ್ತದೆ. ಬೆಕ್ಕು ಗ್ರಾಮದೇವತೆ ಆಗಿರುವುದರಿಂದ ಈ ಗ್ರಾಮಕ್ಕೆ ಬೆಕ್ಕಳಲೆ ಎಂಬ ಹೆಸರು ಬಂದಿದೆ. ಹಲವು ವರ್ಷಗಳ ಹಿಂದೆ ಸಮಾಧಿ ಮಾಡಲಾದ ಬೆಕ್ಕಿನ ಗದ್ದುಗೆಗೆ ಗ್ರಾಮಸ್ಥರು ಪೂಜೆ ಮಾಡುತ್ತಾರೆ. ವರ್ಷಕ್ಕೊಮ್ಮೆ ಜಾತ್ರೆ ಕೂಡ ಇಲ್ಲಿ ನಡೆಯುತ್ತದೆ. ಹಬ್ಬ ಹರಿದಿನಗಳಲ್ಲಿ ಬೆಕ್ಕಿಗೆ

ಈ ಗ್ರಾಮದಲ್ಲಿ ಬೆಕ್ಕು ಅಪಶಕುನವಲ್ಲ| ಇಲ್ಲಿದೆ ಮಾರ್ಜಾಲಕ್ಕೊಂದು ಆಲಯ ! Read More »

ಸುಳ್ಯ: ಕಿಡಿಗೇಡಿಗಳು ಕಿತ್ತೆಸೆದ‌ ಬಹಿಷ್ಕಾರ ಬ್ಯಾನರ್| ಮತ್ತೆ ಅದೇ ಜಾಗದಲ್ಲಿ ಹೊಸ ಬ್ಯಾನರ್ ಹಾಕಿದ ಗ್ರಾಮಸ್ಥರು

ಸಮಗ್ರ ನ್ಯೂಸ್: ಅರಂತೋಡು ಮರ್ಕಂಜ ಎಲಿಮಲೆ ರಸ್ತೆಯಲ್ಲಿ ವೈ.ಎಂ.ಕೆ.ಚಡಾವು ಬಳಿ ಅಡ್ತಲೆ ನಿವಾಸಿಗಳು ಅಳವಡಿಸಿದ್ದ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಕಿಡಿಗೇಡಿಗಳು ನದಿಗೆ ಎಸೆದಿದ್ದು, ಅದೇ ಜಾಗದಲ್ಲಿ ಗ್ರಾಮಸ್ಥರು ಮತ್ತೆ ಬ್ಯಾನರ್ ಅಳವಡಿಸಿದ್ದಾರೆ. ಈ ರಸ್ತೆಯ ಮೂಲಕ ಅಂದು ಮುಖ್ಯಮಂತ್ರಿಗಳು ರಸ್ತೆಯಲ್ಲಿ ಸುಳ್ಯಕ್ಕೆ ಬರುವವರಿದ್ದರು. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಬ್ಯಾನರ್ ತೆಗಿದಿದ್ದಾರೆಂದು ಖಂಡಿಸಿ ಅಡ್ತಲೆಯ ನಾಗರಿಕರು ಬ್ಯಾನರ್ ಕಿತ್ತೆಸೆದವರಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗಿದ್ದರು. ಆ.7 ರಂದು ಪುನಃ ರಸ್ತೆಯ ಫಲಾನುಭವಿಗಳು ವೈ.ಎಂ.ಕೆ. ಬಳಿ ಚುನಾವಣಾ ಬಹಿಷ್ಕಾರದ

ಸುಳ್ಯ: ಕಿಡಿಗೇಡಿಗಳು ಕಿತ್ತೆಸೆದ‌ ಬಹಿಷ್ಕಾರ ಬ್ಯಾನರ್| ಮತ್ತೆ ಅದೇ ಜಾಗದಲ್ಲಿ ಹೊಸ ಬ್ಯಾನರ್ ಹಾಕಿದ ಗ್ರಾಮಸ್ಥರು Read More »

ಚಿನ್ನಕ್ಕೆ ಮುತ್ತಿಕ್ಕಿದ ಸಿಂಧು; 56 ಪದಕಗಳ ಗಳಿಸಿದ ಭಾರತ

ಸಮಗ್ರ ನ್ಯೂಸ್: ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತೀಯ ಆಟಗಾರರ ಪದಕ ಬೇಟೆ ಮುಂದುವರೆದಿದ್ದು ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಚಿನ್ನದ ಪದಕ ಗೆದ್ದಿದ್ದಾರೆ. ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಕೆನಡಾ ಆಟಗಾರ್ತಿ ಮಿಚೆಲ್ ಲೀ ವಿರುದ್ಧ 21-15, 21-13 ಅಂತರದ ಸೆಟ್ ಗಳಿಂದ ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರು. ಸಿಂಧು ಇದುವರೆಗೆ ಭಾರತದ ಸಿಂಗಲ್ಸ್ ನಲ್ಲಿ ಹೆಚ್ಚು ಸಾಧನೆ ಮಾಡಿರುವ ಆಟಗಾರ್ತಿಯಾಗಿದ್ದು ಫೈನಲ್‌ನಲ್ಲಿ ಕೆನಡಾದ ಎದುರಾಳಿಯ ವಿರುದ್ಧ ಸ್ವಲ್ಪ ಕಷ್ಟಪಟ್ಟರು. ಮೊದಲ ಗೇಮ್‌ನಲ್ಲಿ ಮಿಚೆಲ್ ನೆಟ್‌ನ ಹತ್ತಿರ

ಚಿನ್ನಕ್ಕೆ ಮುತ್ತಿಕ್ಕಿದ ಸಿಂಧು; 56 ಪದಕಗಳ ಗಳಿಸಿದ ಭಾರತ Read More »

ತುಳು ಭಾಷೆ ಬಗ್ಗೆ ತುಚ್ಛ ಭಾವನೆ: ಉಪ್ಪಿನಂಗಡಿ ಕಾಲೇಜು ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಗರಂ

ಸಮಗ್ರ ನ್ಯೂಸ್: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ ಘಟನೆ ಆ.8ರಂದು ನಡೆದಿದೆ. ಕಳೆದ ಆ.5 ಮತ್ತು ಆ.8ರಂದು ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ವತಿಯಿಂದ ಕಾಲೇಜಿನಲ್ಲಿ ‘ತುಳುನಾಡ ಐಸಿರಿ’ ಕಾರ್ಯಕ್ರಮ ನಡೆದಿತ್ತು. ಈ ಸಂದರ್ಭ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆನ್ನಲಾಗಿದೆ. ಈ ಬಗ್ಗೆ

ತುಳು ಭಾಷೆ ಬಗ್ಗೆ ತುಚ್ಛ ಭಾವನೆ: ಉಪ್ಪಿನಂಗಡಿ ಕಾಲೇಜು ಪ್ರಾಚಾರ್ಯರ ವಿರುದ್ಧ ವಿದ್ಯಾರ್ಥಿಗಳು ಗರಂ Read More »

ಮಂಗಳೂರು: ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರ ಭೇಟಿ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಭೇಟಿ ಅಧ್ಯಕ್ಷರು ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರಾದ ಮೌಲಾನ ಎನ್.ಕೆ.ಎಂ ಶಾಫಿ ಸಹದಿ ದ.ಕ. ಜಿಲ್ಲಾ ವಖ್ಫ್ ಮಂಡಳಿ ಚೆಯರ್ಮೆನ್ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಎಸ್.ಎಸ್.ಎಫ್. ಜಿಲ್ಲಾಧ್ಯಕ್ಷರಾದ ನವಾಜ್ ಸಖಾಫಿ, ದ.ಕ. ಜಿಲ್ಲಾ ವಖ್ಫ್ ಸಮಿತಿಯ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಮೊಗರ್ಪಣೆ, ಜಿಲ್ಲಾ ವಖ್ಫ್ ಸದಸ್ಯರುಗಳಾದ ಸೈದುದ್ದೀನ್, ಸಿರಾಜುದ್ದಿನ್, ಸ್ಥಳೀಯ

ಮಂಗಳೂರು: ಫಾಜಿಲ್ ಮನೆಗೆ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಅಧ್ಯಕ್ಷರ ಭೇಟಿ Read More »

ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ ಪುಟ್ಟ ಬಾಲಕಿ

ಸಮಗ್ರ ನ್ಯೂಸ್: 5 ವರ್ಷದ ಪುಟ್ಟ ಬಾಲಕಿ ಗ್ರಾಮಕ್ಕೆ ರಸ್ತೆ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿರುವ ಸುದ್ದಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಬಳಿಯ ಉರುಳುಗಲ್ಲು ಗ್ರಾಮದ 5 ವರ್ಷದ ಬಾಲಕಿ ಸಾನ್ವಿ ಅಂಗನವಾಡಿಗೆ ಹೋಗಿ ಬರಲು ರಸ್ತೆ ಮಾಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾಳೆ. ಉರುಳುಗಲ್ಲು ಗ್ರಾಮಸ್ಥರು ಸರಿಯಾದ ರಸ್ತೆ ಸಂಪರ್ಕ ಹಾಗೂ ವಿದ್ಯುತ್ ಇಲ್ಲದೇ ಪರದಾಡುತ್ತಿದ್ದಾರೆ. ಈ ಹಿಂದೆ ಗ್ರಾಮಸ್ಥರು ಸಹ ಹಲವು ಬಾರಿ ಪ್ರತಿಭಟನೆ ಮಾಡಿದ್ದು,

ರಸ್ತೆ, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ ಪುಟ್ಟ ಬಾಲಕಿ Read More »

ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ

ಬೆಂಗಳೂರು: ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಪರಿಹಾರ ವಿಚಾರವಾಗಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಶಾಸಕರ ಆರೋಪವನ್ನು ಅವರು ನಿರಾಕರಿಸಿದ್ದಾರೆ. ಪರಿಹಾರ ವಿಚಾರವಾಗಿ ಟ್ವೀಟ್ ಮಾಡಿದ್ದ ಮಾಜಿ ಸಚಿವ ಎಂಬಿ ಪಾಟೀಲ್, ವಿಜಯಪುರ ಜಿಲ್ಲೆಯ ಪಾಲಿಗೆ ಸರ್ಕಾರ ಇದ್ದೂ ಸತ್ತಂತಾಗಿದ್ದು ನಮ್ಮ ಜಿಲ್ಲೆ ಅನಾಥವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಅಭಿವೃದ್ಧಿಯ ವಿಷಯದಲ್ಲೂ ಶೂನ್ಯ ಕೊಡುಗೆ! ಜಿಲ್ಲೆಯ ಪಾಲಿಗೆ ಸರ್ಕಾರ ಜೀವಂತವಿದ್ದರೆ ಇದಕ್ಕೆ ಏನಾದರೂ

ಪ್ರಕೃತಿ ವಿಕೋಪದ ಪರಿಹಾರದಲ್ಲಿ ತಾರತಮ್ಯ ಆರೋಪ | ಸಿಎಂನಿಂದ ಸ್ಪಷ್ಟನೆ Read More »

ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಮಾರಾಟ ಮಾಡುತ್ತಿದ್ದ ಮನೆಯ ಮೇಲೆ‌ ನಗರಸಭೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಗೋಹತ್ಯೆ ಮಾಡುತ್ತಿದ್ದ ಮನೆಯ ವಿದ್ಯುತ್ ಸಂಪರ್ಕ ಬಂದ್ ಮಾಡಿ ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿಯನ್ನಾಗಿಸಲು ಸಿದ್ದತೆ ಮಾಡಿಕೊಂಡಿದ್ದಾರೆ. ಇನ್ನೂ ಚಿಕ್ಕಮಗಳೂರು ನಗರಸಭೆಯಿಂದ ನಿರಂತರವಾಗಿ ಗೋಮಾಂಸ ಅಡ್ಡೆಗಳ ಮೇಲೆ‌‌ ದಾಳಿ ನಡೆಸಲಾಗುತ್ತಿದ್ದು ಬುಲ್ಡೋಜರ್ ಪ್ರಯೋಗವನ್ನು

ಚಿಕ್ಕಮಗಳೂರು : ಗೋ ಹತ್ಯೆ ತಡೆಯಲು ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ Read More »

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು

ಸಮಗ್ರ‌ ನ್ಯೂಸ್ : ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ಭಾನುವಾರ ಇಬ್ಬರನ್ನು ಬಂಧಿಸಿದ್ದರು. ಇದೀಗ ಬಂಧಿತರನ್ನು ಬಿಗಿ ಬಂದೋಬಸ್ತು ಮೂಲಕ ಪಿಎಫ್ಐ ಕಚೇರಿಗೆ ಕರೆದುಕೊಂಡು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸುತ್ತಿದ್ದು, ಬಳಿಕ ಇಬ್ಬರನ್ನೂ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಬಂಧಿತರಾಗಿರುವ ಅಬೀದ್ ಮತ್ತು ನೌಫಾಲ್ ಅವರನ್ನು ಸುಳ್ಯದ ಪಾಪ್ಯುಲರ್ ಫ್ರಂಟ್ ಅಫ್ ಇಂಡಿಯಾ ಕಛೇರಿಯಲ್ಲಿ ಮಹಜರು

ಪ್ರವೀಣ್ ಹತ್ಯೆ ಪ್ರಕರಣ; ಆರೋಪಿಗಳ ಜೊತೆಗೆ ಸುಳ್ಯ ಪಿಎಫ್ಐ ಕಚೇರಿ ಮಹಜರು ನಡೆಸಿದ ಪೊಲೀಸರು Read More »