August 2022

ವಿದ್ಯಾರ್ಥಿಗಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಇಸ್ರೋದಿಂದ ಉಡಾವಣೆ

ಸಮಗ್ರ ನ್ಯೂಸ್: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮೊದಲ ಸಣ್ಣ ಉಪಗ್ರಹ ಉಡಾವಣಾ ವಾಹಕ ಮಿಷನ್ (ಎಸ್‌ಎಸ್‌ಎಲ್‌ವಿ) ಅನ್ನು ಪ್ರಾರಂಭಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭೂ ವೀಕ್ಷಣಾ ಉಪಗ್ರಹ (ಇಒಎಸ್-02) ಮತ್ತು ವಿದ್ಯಾರ್ಥಿಗಳು ನಿರ್ಮಿಸಿದ ಉಪಗ್ರಹ-ಆಜಾದಿಸ್ಯಾಟ್ ಅನ್ನು ಹೊತ್ತ ಎಸ್‌ಎಸ್‌ಎಲ್ವಿ-ಡಿ1 ಅನ್ನು ಇಸ್ರೋ ಉಡಾವಣೆ ಮಾಡಿದೆ. ಇನ್ನು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಸ್ಪೇಸ್ ಸೆಂಟರ್ ನಿಂದ ಒಂದು ಪರಿವೀಕ್ಷಣಾ ಉಪಗೃಹ ಮತ್ತು ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ದೇಶದ ಗ್ರಾಮೀಣ […]

ವಿದ್ಯಾರ್ಥಿಗಳೇ ತಯಾರಿಸಿದ ‘ಆಜಾದಿ ಸ್ಯಾಟ್’ ಉಪಗ್ರಹ ಇಸ್ರೋದಿಂದ ಉಡಾವಣೆ Read More »

ಬಿಗ್ ಬಾಸ್ ನಲ್ಲಿ ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ|ಜಾಲತಾಣದಲ್ಲಿ ಹರಿದು ಬಂತು ನೆಗೆಟಿವ್ ಕಾಮೆಂಟ್ಸ್

ಸಮಗ್ರ‌ ನ್ಯೂಸ್: ಬಿಗ್ ಬಾಸ್ ಶೋ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಓಟಿಟಿಯಲ್ಲಿ ಮೂಡಿ ಬರುತ್ತಿರುವ ಎಪಿಸೋಡ್ ಬಹುತೇಕ ಚಿತ್ರೀಕರಣವಾಗಿದೆ. ಮೊದಲನೇ ಸ್ಪರ್ಧಿಯಾಗಿ ಜ್ಯೋತಿಷಿ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಎರಡನೇ ಸ್ಪರ್ಧಿಯಾಗಿ ಕಾಲಿಟ್ಟವರು ಸದಾ ಒಂದಿಲ್ಲೊಂದು ವಿವಾದದಿಂದ ಖ್ಯಾತಿ ಪಡೆದಿರುವ ಟಿಕ್ ಟಾಕ್ ಸ್ಟಾರ್ ಸೋನು ಗೌಡ. ಟಿಕ್ ಟಾಕ್ ಮೂಲಕ ಅಸಂಖ್ಯಾತ ಫಾಲೋವರ್ಸ್ ಹೊಂದಿದ್ದ ಸೋನು ಗೌಡ ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದಾರೆ. ಇವರ ಹೆಸರು ಘೋಷಣೆ

ಬಿಗ್ ಬಾಸ್ ನಲ್ಲಿ ಟಿಕ್ ಟಾಕ್ ಸ್ಟಾರ್ ಸೋನು ಶ್ರೀನಿವಾಸ್ ಗೌಡ|ಜಾಲತಾಣದಲ್ಲಿ ಹರಿದು ಬಂತು ನೆಗೆಟಿವ್ ಕಾಮೆಂಟ್ಸ್ Read More »

ಬಂಟ್ವಾಳ; ಚರಂಡಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಬಂಟ್ವಾಳ : ಚರಂಡಿಯ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಪೇಟೆಯಲ್ಲಿ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಚಂದಳಿಕೆ ನಿವಾಸಿ ಪಕ್ರು ಎಂದು ಗುರುತಿಸಲಾಗಿದೆ. ಅವರ ಮೃತದೇಹ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ಬಳಿ ವಿಟ್ಲ- ಕಾಸರಗೋಡು ಮುಖ್ಯ ರಸ್ತೆಯಲ್ಲಿನ ತೆರೆದ ಸ್ಥಿತಿಯಲ್ಲಿದ್ದ ಚರಂಡಿಗೆ ಕವುಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮದ್ಯಪಾನದ ಅಮಲಿನಲ್ಲಿ ನಿಯಂತ್ರಣ ಕಳೆದುಕೊಂಡ ಪಕ್ರು ಸ್ಲ್ಯಾಬ್ ತೆರೆದ ಸ್ಥಿತಿಯಲ್ಲಿದ್ದ ಚರಂಡಿಗೆ ಆಕಸ್ಮಿಕವಾಗಿ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಚರಂಡಿಯಲ್ಲಿ ಮಳೆ ನೀರು ತುಂಬಿದ್ದು, ಕವುಚಿ

ಬಂಟ್ವಾಳ; ಚರಂಡಿ ನೀರಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್  ಕೊಡುಗೆಯಾಗಿ ನೀಡಿದ ನಟ ಪ್ರಕಾಶ್ ರೈ

ಸಮಗ್ರ ನ್ಯೂಸ್: ಖ್ಯಾತ ಚಲನಚಿತ್ರ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಸ್ಮರಣೆಯಲ್ಲಿ ಮೈಸೂರಿನ ಮಂಡಿ ಮೊಹಲ್ಲಾದ ಸಿಎಸ್‌ಐ ಹೋಲ್ಡ್ಸ್‌ವರ್ತ್ ಸ್ಮಾರಕ ಆಸ್ಪತ್ರೆಗೆ ನಟ ಪ್ರಕಾಶ್ ರೈ ‘ಅಪ್ಪು ಎಕ್ಸ್ ಪ್ರೆಸ್’ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಪ್ರಕಾಶ್ ರಾಜ್ ಪ್ರತಿಷ್ಠಾನದಿಂದ ಅಪ್ಪು ಎಕ್ಸ್‌ಪ್ರೆಸ್ ಹೆಸರಿನ ಆಂಬ್ಯುಲೆನ್ಸ್‌ಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಒಂದು ವರ್ಷದೊಳಗೆ ನೀಡುವ ಯೋಜನೆ ಇದೆ. ಇದಕ್ಕಾಗಿ ಕೈಜೋಡಿಸುವ ಸ್ನೇಹಿತರಿದ್ದಾರೆ. ಯಾರೂ ಕೊಡದಿದ್ದರೂ ನಾನು ದುಡಿಯುವ ಹಣದಲ್ಲೇ ಈ ಸತ್ಕಾರ್ಯ ಮಾಡುತ್ತೇನೆ

ಅಪ್ಪು ಎಕ್ಸ್‌ಪ್ರೆಸ್‌ ಆಂಬ್ಯುಲೆನ್ಸ್  ಕೊಡುಗೆಯಾಗಿ ನೀಡಿದ ನಟ ಪ್ರಕಾಶ್ ರೈ Read More »

ಟಾಟಾ ಸುಮೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ ಗಾಯ

ಸಮಗ್ರ ನ್ಯೂಸ್ : ಜಿಲ್ಲೆಯ ನೆಲಮಂಗಲದ ಬಳಿಯಲ್ಲಿ ಟಾಟಾ ಸುಮೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕಂಬಳ ಬಳಿಯಲ್ಲಿ ಟಾಟಾ ಸುಮೋ ಪಲ್ಟಿಯಾದ ಪರಿಣಾಮ, ಕಾರಿನಲ್ಲಿದ್ದಂತ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ವ್ಯಕ್ತಿಯನ್ನು ವಿಜಯಪುರ ಜಿಲ್ಲೆಯ ತಾಳಿಕೋಟೆ ಮೂಲದ ಮೊಹಮ್ಮದ್ (73) ಎಂಬುದಾಗಿ ಗುರುತಿಸಲಾಗಿದೆ.

ಟಾಟಾ ಸುಮೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ ಗಾಯ Read More »

ದರ್ಗಾಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಸಮಗ್ರ ನ್ಯೂಸ್ : ಧಾರವಾಡ ಜಿಲ್ಲೆಯ ಕುಂದಗೊಳದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದರ್ಗಾಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ಅ ನಡೆದಿದೆ. ಕುಂದಗೊಳದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಜಿಗಳೂರು ಬಳಿಯಿರುವ ದರ್ಗಾವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸಂಬಂಧಿಕರ ಮನೆಯ ಗೃಹಪ್ರವೇಶ ಮುಗಿಸಿ ಹುಬ್ಬಳ್ಳಿಯ ನವನಗರಕ್ಕೆ ವಾಪಸ್ ಬರುವ ವೇಳೆ ನಿಯಂತ್ರಣ ತಪ್ಪಿ ಪಕ್ಕದಲ್ಲಿದ್ದ ದರ್ಗಾಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಸ್ಥಳದಲ್ಲೇ

ದರ್ಗಾಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು Read More »

ಕೆಎಸ್ಆರ್ ಟಿಸಿ ಡಿಪೋ ವ್ಯವಸ್ಥಾಪಕ ಸಿಬ್ಬಂದಿ ತುಷಾರ್ ನಿಧನ

ದಾವಣಗೆರೆ : ಕೆಎಸ್‌ಆರ್‌ಟಿಸಿ ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್‌.ಸಿ. ತುಷಾರ್‌ (33) ಶುಕ್ರವಾರ ಬಸ್‌ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಸ್ಥೆಯ ಸಿಬ್ಬಂದಿಯ ಹಳೆ ಪ್ರಕರಣವೊಂದರ ವಿಚಾರಣೆ ಸಂಬಂಧ ಶಿರಸಿಗೆ ಬಂದಿದ್ದ ಅವರು, ಬೆಂಗಳೂರಿಗೆ ವಾಪಸ್ಸಾಗುವಾಗ ಮಾರ್ಗ ಮಧ್ಯೆ ದಾವಣಗೆರೆಯ ಬಸ್‌ ನಿಲ್ದಾಣದಲ್ಲಿ ನಿಧನರಾಗಿದ್ದಾರೆ. ತಲೆ ಸುತ್ತು ಕಾಣಿಸಿಕೊಂಡು ಆಯಾಸಗೊಂಡಿದ್ದ ಅವರನ್ನು ಬಸ್‌ನ ನಿರ್ವಾಹಕರು ಆಸ್ಪತ್ರೆಗೆ ಕರೆದೊಯ್ಯಲು ಅಣಿಯಾಗುತ್ತಿದ್ದಂತೆಯೇ, ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಹಾಗೂ 4 ತಿಂಗಳ ಮಗು ಇದ್ದು, ಮೃತದೇಹವನ್ನು ಬೆಂಗಳೂರಿಗೆ ಕಳುಹಿಸಲಾಗಿದೆ.

ಕೆಎಸ್ಆರ್ ಟಿಸಿ ಡಿಪೋ ವ್ಯವಸ್ಥಾಪಕ ಸಿಬ್ಬಂದಿ ತುಷಾರ್ ನಿಧನ Read More »

ಉಡುಪಿ: ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣಕ್ಕೆ ಟ್ವಿಸ್ಟ್| ಆಕೆ ನಿಜವಾಗ್ಲೂ ಸತ್ತಿದ್ದು ಹೇಗೆ ಗೊತ್ತಾ?

ಸಮಗ್ರ ನ್ಯೂಸ್: ಬೈಂದೂರಿನಲ್ಲಿ ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣದ ವೈದ್ಯಕೀಯ ವರದಿ ಇದೀಗ ಬಂದಿದ್ದು, ಇದರಲ್ಲಿ ಆಕೆಯ ಸಾವಿಗೆ ಚಾಕಲೇಟ್‌ ನುಂಗಿರುವುದು ಕಾರಣವಲ್ಲ, ಬದಲಾಗಿ ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ, ಬೈಂದೂರು ಬಿಜೂರು ಗ್ರಾಮದ ಸುಪ್ರೀತಾ ಪೂಜಾರಿ ಅವರ ಪುತ್ರಿ ಸಮನ್ವಿ (6)ಮೃತ ಬಾಲಕಿ. ಈಕೆ ಜುಲೈ 20ರ ಬೆಳಗ್ಗೆ ಶಾಲೆಗೆ ಹೋಗಲು ನಿರಾಕರಿಸಿದ್ದಕ್ಕೆ ತಾಯಿ ಚಾಕಲೇಟ್ ನೀಡಿ ಶಾಲೆಗೆ ಹೋಗುವಂತೆ ಪ್ರೇರೇಪಿಸಿದ್ದರು. ಚಾಕಲೇಟ್

ಉಡುಪಿ: ಚಾಕಲೇಟ್ ನುಂಗಿ ಬಾಲಕಿ ಸಾವನ್ನಪ್ಪಿದ್ದಾಳೆನ್ನಲಾದ ಪ್ರಕರಣಕ್ಕೆ ಟ್ವಿಸ್ಟ್| ಆಕೆ ನಿಜವಾಗ್ಲೂ ಸತ್ತಿದ್ದು ಹೇಗೆ ಗೊತ್ತಾ? Read More »

ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು

ಮಂಗಳೂರು: ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ನಡೆದಿದೆ. ಕೊಂಚಾಡಿ ನಿವಾಸಿ ಆತೀಶ್ (20) ಮೃತಪಟ್ಟವರು. ಆತೀಶ್ ನಂತೂರು ಜಂಕ್ಷನ್ ಕಡೆಯಿಂದ ಬಿಕರ್ನಕಟ್ಟೆ ಕೈಕಂಬ ಕಡೆಗೆ ಹಾದು ಹೋಗಿರುವ ರಸ್ತೆಯಲ್ಲಿ ಸಂಜೆ 6.45ರ ಸುಮಾರಿಗೆ ಸಂಚರಿಸುತ್ತಿದ್ದರು. ಮಳೆ ಜೋರಾಗಿ ಸುರಿಯುತ್ತಿದ್ದುದರಿಂದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್‌ಗಿಂತ ಮೊದಲು ಡಿವೈಡರ್‍ ಪಕ್ಕದಲ್ಲಿದ್ದ ಹೊಂಡವನ್ನು ಅವರು ಗಮನಿಸಲಿಲ್ಲ. ಹೊಂಡದ ಸನಿಹಕ್ಕೆ ಬರುವಾಗ ಹೊಂಡ

ಮಂಗಳೂರು: ಹೊಂಡ ತಪ್ಪಿಸಲು ಹೋಗಿ ಡಿವೈಡರ್‌‌ಗೆ ಸ್ಕೂಟರ್ ಢಿಕ್ಕಿ-ಯುವಕ ಸಾವು Read More »

ವ್ಯಾಪಾರಕ್ಕಿಳಿದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡ್ತಿದೆಯಾ ಬಿಜೆಪಿ? ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ – ಕಾಂಗ್ರೆಸ್

ಸಮಗ್ರ ನ್ಯೂಸ್: ಆರ್ ಎಸ್ಎಸ್ ಹಾಗೂ ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ ಎಂದು ರಾಜ್ಯ ಕಾಂಗ್ರೆಸ್ ಘಟಕ ವಾಗ್ದಾಳಿ ನಡೆಸಿದೆ. ಪ್ರಚಾರದ ಹುಚ್ಚಿಗಾಗಿ ಕಳಪೆ ಮತ್ತು ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ. ಒಳಗೆ ತಿರಂಗಾ ದ್ವೇಷ, ಹೊರಗೆ ನಾಟಕ. ಪಕ್ಷದ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ? ಮೊದಲು ಸ್ಪಷ್ಟಪಡಿಸಿ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಆಗ್ರಹಿಸಿದೆ. ಬಿಜೆಪಿಗೆ ನಿಜವಾಗಿಯೂ

ವ್ಯಾಪಾರಕ್ಕಿಳಿದು ರಾಷ್ಟ್ರಧ್ವಜಕ್ಕೆ ಅವಮಾನ ಮಾಡ್ತಿದೆಯಾ ಬಿಜೆಪಿ? ಧನದಾಹಕ್ಕೆ ರಾಷ್ಟ್ರಧ್ವಜ ವಿರೂಪ – ಕಾಂಗ್ರೆಸ್ Read More »