August 2022

ಕರ್ನಾಟಕದಲ್ಲಿ ಕನಿಷ್ಠ ವೇತನ‌ ಪ್ರಕಟ| ಇನ್ಮುಂದೆ ಇಷ್ಟು ಸಂಬಳ ಕೊಡ್ಲೇಬೇಕು

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸರ್ಕಾರ ಕನಿಷ್ಠ ವೇತನ ಪ್ರಕಟಿಸಿದೆ. ಕೊರೋನಾ ಕಾಟದಿಂದಾಗಿ ಕಳೆದ 2 ವರ್ಷಗಳಿಂದ ನಿಂತುಹೋಗಿದ್ದ ಕನಿಷ್ಠ ವೇತನವನ್ನು ಸರ್ಕಾರ ಜಾರಿಗೆ ಮುಂದಾಗಿದೆ. ಈ ಮೂಲಕ ಕಾರ್ಮಿಕರಿಗೆ ಸರ್ಕಾರ ಗುಡ್​ನ್ಯೂಸ್ ಕೊಟ್ಟಿದೆ. ಕೊರೋನಾದಿಂದ ಕನಿಷ್ಠ ವೇತನ ಪರಿಷ್ಕೃರಣೆ ಆಗಿರಲಿಲ್ಲ. ಈಗ ಒಂದಷ್ಟು ವಿಭಾಗಕ್ಕೆ ಕನಿಷ್ಠ ವೇತನ ಜಾರಿಯಾಗಿದ್ದು ಕಾರ್ಮಿಕರಿಗೆ ಹಬ್ಬಗಳ ಮಾಸದಂದೇ ಗಿಫ್ಟ್ ಸಿಕ್ಕಂತಾಗಿದೆ. ಹೊಸ ವೇತನವು ಜುಲೈ 28ರಿಂದ ಅಧಿಸೂಚನೆ ಪ್ರಕಟವಾದಾಗಿನಿಂದ ಜಾರಿಗೆ ಬಂದಿದೆ. ಕಾರ್ಮಿಕರ ವೇತನ, ಪಿಎಫ್​ಗಾಗಿ ಕಡಿತವಾಗುವ ಹಣ ಹಾಗೂ […]

ಕರ್ನಾಟಕದಲ್ಲಿ ಕನಿಷ್ಠ ವೇತನ‌ ಪ್ರಕಟ| ಇನ್ಮುಂದೆ ಇಷ್ಟು ಸಂಬಳ ಕೊಡ್ಲೇಬೇಕು Read More »

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಮಗುಚಿ ಬಿದ್ದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ರಾಷ್ಟ್ರೀಯ ಹೆದ್ದಾರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು ಕಾರಿನಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದು ಕೇರಳಿಗರಲ್ಲ; ಸ್ಥಳೀಯರೇ ಹತ್ಯೆ‌ ಮಾಡಿದ್ದಾರೆ – ಗೃಹ ಸಚಿವ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರುವಿನಲ್ಲಿ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪೋಟಕ ಮಾಹಿತಿ ನೀಡಿದ್ದಾರೆ. ಈವರೆಗೆ ಕೇರಳದಿಂದ ಬಂದ ಹಂತಕರು ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಾಡಿದ್ದು, ಅವರಿಗೆ ಸ್ಥಳೀಯರು ಸಹಾಯ ಮಾಡಿದ್ದಾರೆ ಎಂದು ಭಾವಿಸಲಾಗಿತ್ತಾದರೂ ಆದರೆ ಹತ್ಯೆ ಮಾಡಿದ್ದು ಸ್ಥಳೀಯರೇ ಎಂದು ಅರಗ ಜ್ಞಾನೇಂದ್ರ ಹೇಳಿದ್ದಾರೆ. ಕನ್ನಡದ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ

ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದು ಕೇರಳಿಗರಲ್ಲ; ಸ್ಥಳೀಯರೇ ಹತ್ಯೆ‌ ಮಾಡಿದ್ದಾರೆ – ಗೃಹ ಸಚಿವ Read More »

ಕಾಲೇಜು ದಿನಗಳಲ್ಲಿ ತೆಗೆದ ಫೋಟೋ ಹಂಚಿಕೊಂಡ ನಟಿ ರಮ್ಯಾ| ‘18ನೇ ವಯಸ್ಸಿನಲ್ಲಿ ನಾನು’

ಸಮಗ್ರ ನ್ಯೂಸ್: ನಟನೆಯಿಂದ ರಮ್ಯಾ ದೂರ ಉಳಿದುಕೊಂಡಿದ್ದರೂ ಕೂಡ ಅವರು ಚಿತ್ರರಂಗದ ಜೊತೆಗಿನ ನಂಟು ಕಡಿದುಕೊಂಡಿಲ್ಲ. ಅವರ ಮೇಲೆ ಅಭಿಮಾನಿಗಳು ಹೊಂದಿರುವ ಕ್ರೇಜ್​ ಕೂಡ ತಗ್ಗಿಲ್ಲ. ಸೆಲೆಬ್ರಿಟಿಗಳು ಆಗಾಗ ತಮ್ಮ ಹಳೇ ಫೋಟೋಗಳನ್ನು ಶೇರ್​ ಮಾಡಿಕೊಳ್ಳುತ್ತಾರೆ. ಆ ಫೋಟೋಗಳನ್ನು ಕಂಡಾಗ ನೆನಪಿನ ಪುಟ ತೆರೆಯುತ್ತದೆ. ಅಪರೂಪದ ಚಿತ್ರಪಟವನ್ನು ನೋಡಿ ಅಭಿಮಾನಿಗಳೂ ಖುಷಿ ಪಡುತ್ತಾರೆ. ನಟಿ ರಮ್ಯಾ  ಅವರು ಈಗೊಂದು ಫೋಟೋ ಹಂಚಿಕೊಂಡಿದ್ದಾರೆ. ಕಾಲೇಜು ದಿನಗಳಲ್ಲಿ ತೆಗೆದ ಫೋಟೋ ಅದು. ಅದರಲ್ಲಿ ತುಂಬ ಕ್ಯೂಟ್​ ಆಗಿ ಕಾಣುತ್ತಿರುವ ಅವರನ್ನು ಫ್ಯಾನ್ಸ್​

ಕಾಲೇಜು ದಿನಗಳಲ್ಲಿ ತೆಗೆದ ಫೋಟೋ ಹಂಚಿಕೊಂಡ ನಟಿ ರಮ್ಯಾ| ‘18ನೇ ವಯಸ್ಸಿನಲ್ಲಿ ನಾನು’ Read More »

ನ. 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

ಸಮಗ್ರ ನ್ಯೂಸ್: ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಕರ್ನಾಟಕ ಸರಕಾರವು ಅಪ್ಪುಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ ಮಾಡಿತ್ತು. ಆದರೆ, ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ತಮ್ಮ ನೆಚ್ಚಿನ ನಟನಿಗೆ ಈ ಅತ್ಯುನ್ನತ ಪ್ರಶಸ್ತಿಯನ್ನು ಯಾವಾಗ ಪ್ರದಾನ ಮಾಡಲಾಗುತ್ತದೆ ಎಂದು ಅಭಿಮಾನಿಗಳು ಕಾದಿದ್ದರು. ಕೊನೆಗೂ ಆ ದಿನಾಂಕ ಘೋಷಣೆಯಾಗಿದೆ. ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿ ಈ ಪ್ರಶಸ್ತಿ

ನ. 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ Read More »

ವೈರಲ್ ಆಗ್ತಿದೆ ‘ಹರ್ ಘರ್ ತಿರಂಗಾ’ ಹಾಡು

ಸಮಗ್ರ ನ್ಯೂಸ್: ‘ಹರ್ ಘರ್ ತಿರಂಗಾ’ ಗೀತೆಯ ವಿಡಿಯೋ 75 ವರ್ಷಗಳ ಸ್ವಾತಂತ್ರ್ಯ ಮತ್ತು ಭಾರತದ ಜನರು, ಸಂಸ್ಕೃತಿ ಮತ್ತು ಸಾಧನೆಗಳ ವೈಭವದ ಇತಿಹಾಸವನ್ನು ಆಚರಿಸುತ್ತದೆ ಮತ್ತು ಸ್ಮರಿಸುತ್ತದೆ. ವಿಡಿಯೋದಲ್ಲಿ ಅಮಿತಾಬ್ ಬಚ್ಚನ್, ಕಪಿಲ್ ದೇವ್, ವಿರಾಟ್ ಕೊಹ್ಲಿ, ಅನುಪಮ್ ಖೇರ್, ಅನುಷ್ಕಾ ಶರ್ಮಾ, ಕೆಎಲ್ ರಾಹುಲ್, ಜಾಕಿ ಶ್ರಾಫ್, ಪ್ರಭಾಸ್ ಮತ್ತು ಆಶಾ ಭೋಂಸ್ಲೆ ಸೇರಿದಂತೆ ಖ್ಯಾತ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. “ಹರ್ ಘರ್ ತಿರಂಗಾ…ಘರ್-ಘರ್ ತಿರಂಗಾ, ನಮ್ಮ ತ್ರಿವರ್ಣ ಧ್ವಜಕ್ಕೆ ಈ ಮಧುರವಾದ ವಂದನೆಯೊಂದಿಗೆ ನಮ್ಮ

ವೈರಲ್ ಆಗ್ತಿದೆ ‘ಹರ್ ಘರ್ ತಿರಂಗಾ’ ಹಾಡು Read More »

ಕಾಮನ್‌ವೆಲ್ತ್ ಕ್ರೀಡಾಕೂಟ| ಭಾರತಕ್ಕೆ ಆರನೇ ಚಿನ್ನದ ಪದಕ

ಸಮಗ್ರ ನ್ಯೂಸ್: ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತವು ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿಯೂ ಭರ್ಜರಿ ಯಶಸ್ಸನ್ನು ಸಾಧಿಸಿದೆ. ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ಭಾರತದ ಸುಧೀರ್ ಮೊದಲ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಗುರುವಾರ ತಡರಾತ್ರಿ ನಡೆದ ಪುರುಷರ ಹೆವಿವೇಯ್ಟ್ ವಿಭಾಗದಲ್ಲಿ ಸುಧೀರ್ 134.5 ಅಂಕಗಳೊಂದಿಗೆ ಕಾಮನ್ ವೆಲ್ತ್ ಗೇಮ್ಸ್ ದಾಖಲೆ ನಿರ್ಮಿಸಿದರು. ಇದರೊಂದಿಗೆ, ಈ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಪದಕಗಳ ಸಂಖ್ಯೆ 6 ಕ್ಕೆ ತಲುಪಿದೆ ಮತ್ತು ಒಟ್ಟು ಪದಕಗಳು 20 ಕ್ಕೆ ತಲುಪಿವೆ.ಪ್ಯಾರಾ ಪವರ್

ಕಾಮನ್‌ವೆಲ್ತ್ ಕ್ರೀಡಾಕೂಟ| ಭಾರತಕ್ಕೆ ಆರನೇ ಚಿನ್ನದ ಪದಕ Read More »

ಚಲಿಸುತ್ತಿದ್ದ ವಾಹನದ ಮೇಲೆ ಉರುಳಿ ಬಿದ್ದ ಬೃಹತ್ ಮರ

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿನಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಬೃಹತ್ ಮರ ಉರುಳಿ ಬಿದ್ದಿದ್ದು, ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ. ಆಗುಂಬೆ ಘಾಟಿಯ ಎರಡನೇ ತಿರುವುವಿನಲ್ಲಿ ಕಳೆದ ತಡರಾತ್ರಿ ಚಲಿಸುತ್ತಿದ್ದ ಟಾಟಾ ಏಸ್​ ಮೇಲೆ ಮರ ಉರುಳಿ ಬಿದ್ದಿದೆ. ವಾಹನದಲ್ಲಿ ಚಾಲಕ ಸೇರಿ ಇನ್ನೋರ್ವ ಮುಂಭಾಗದಲ್ಲಿ ಇದ್ದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ. ಮರ ಬಿದ್ದ ತಕ್ಷಣ ಗಾಬರಿಯಾದ ಚಾಲಕ ವಾಹನ ಬಿಟ್ಟು ಕೆಳಗೆ ಇಳಿದು ಓಡಿ ಹೋಗಿದ್ದಾನೆ. ಮರ ಬಿದ್ದ ಕಾರಣ ಕೆಲ ಕಾಲ ವಾಹನ ಸಂಚಾರಕ್ಕೆ

ಚಲಿಸುತ್ತಿದ್ದ ವಾಹನದ ಮೇಲೆ ಉರುಳಿ ಬಿದ್ದ ಬೃಹತ್ ಮರ Read More »

ನೆರೆ ನೀರಿನಲ್ಲಿ ಕೊಚ್ಚಿ ಹೋಗಿ ಮರಳಿ ಮನೆ ಸೇರಿದ ಮುದ್ದಾದ ನಾಯಿ ಮರಿಗಳು

ಕೊಲ್ಲಮೊಗ್ರ : ಕರಾವಳಿಯಲ್ಲಿ ಸುರಿದ ಭಾರೀ ಮಳೆಗೆ ನೂರಾರು ಮನೆಗಳು ಜಲಾವೃತವಾಗಿದ್ದು, ಕೃಷಿ ಭೂಮಿಗಳು ಭೂಕುಸಿತಕ್ಕೆ ಸಂಪೂರ್ಣ ಹಾನಿಯಾಗಿವೆ. ಮಳೆ ಪ್ರವಾಹಕ್ಕೆ ಜನ ಜಾನುವಾರುಗಳು ಕೊಚ್ಚಿ ಹೋಗಿದೆ. ಅಗಸ್ಟ್ 1 ರಂದು ಕೊಲ್ಲಮೊಗ್ರದ ಇಡೀ ಗ್ರಾಮ ಜಲಾವೃತಗೊಂಡಿದ್ದು, ಈ ವೇಳೆ ನೆರೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಎರಡು ಮುದ್ದಾದ ನಾಯಿ ಮರಿಗಳು ಮತ್ತೆ ಮನೆ ಸೇರಿವೆ. ದೋಲನಮನೆ ಲಲಿತಾ ಎಂಬವರ ಮನೆ ಪ್ರವಾಹದಿಂದಾಗಿ ಕೊಚ್ಚಿ ಹೋಗಿತ್ತು, ಈ ಸಂದರ್ಭ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ನೀರುಪಾಲಾಗಿದ್ದವು, ಅಲ್ಲದೆ ಮನೆ

ನೆರೆ ನೀರಿನಲ್ಲಿ ಕೊಚ್ಚಿ ಹೋಗಿ ಮರಳಿ ಮನೆ ಸೇರಿದ ಮುದ್ದಾದ ನಾಯಿ ಮರಿಗಳು Read More »

ಚಲಿಸುತ್ತಿದ್ದ ಸಾರಿಗೆ ಬಸ್ ನಿಂದ ಬಿದ್ದು ಮಹಿಳೆ ಸಾವು

ಬಳ್ಳಾರಿ: ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ಬಿದ್ದು ಮಹಿಳೆ ಸಾವನಪ್ಪಿದ ಘಟನೆಯೊಂದು ತಾಲೂಕಿನ ವೇಣಿ ವೀರಾಪುರದ ಹೆದ್ದಾರಿಯಲ್ಲಿ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಮಹಿಳೆ ಬಾಗಿಲು ಬಳಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ದುರಂತ ಸಂಭವಿಸಿದೆ ಎನ್ನಲಾಗಿದೆ. ಬಳ್ಳಾರಿಯಿಂದ ಹೊಸಪೇಟೆಗೆ ತೆರಳುತ್ತಿದ್ದ KA 34, F-1228 ನಂಬರ್‌ನ ಸಾರಿಗೆ ಬಸ್​​ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು. ಬಸ್ ಚಲಿಸುತ್ತಿರುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕುಡುತಿನಿ ಠಾಣೆ ಪೊಲೀಸರು ಭೇಟಿ ನೀಡಿ

ಚಲಿಸುತ್ತಿದ್ದ ಸಾರಿಗೆ ಬಸ್ ನಿಂದ ಬಿದ್ದು ಮಹಿಳೆ ಸಾವು Read More »