August 2022

ಲೈಂಗಿಕ ದೌರ್ಜನ್ಯ ಆರೋಪ| ಮುರುಘಾ ಶರಣರಿಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಶರಣ ಸ್ವಾಮೀಜಿಗಳಿಗೆ ಬಂಧನದ ಭೀತಿ ಎದುರಾಗಿದೆ. ಶ್ರೀಗಳ ವಿರುದ್ಧ ಆರೋಪ ಮಾಡಿರುವ ಇಬ್ಬರು ಬಾಲಕಿಯರನ್ನು ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ. ವಿಚಾರಣೆ ಸಂದರ್ಭದಲ್ಲಿ ಬಾಲಕಿಯರು ಶ್ರೀಗಳ ವಿರುದ್ಧ ಹೇಳಿಕೆ ನೀಡಿದರೆ ಮುರುಘಾ ಶ್ರೀಗಳನ್ನು ಬಂಧಿಸಬೇಕಾದ ಅನಿವಾರ್ಯತೆ ಪೊಲೀಸರಿಗೆ ಎದುರಾಗುವ ಸಾಧ್ಯತೆಗಳಿವೆ. ನಾಳೆ ಜಿಲ್ಲಾ ನ್ಯಾಯಾೀಧಿಶರ ಮುಂದೆ ಬಾಲಕಿಯರನ್ನು ಹಾಜರುಪಡಿಸುವ ಸಾಧ್ಯತೆಯಿದ್ದು, ನ್ಯಾಯಾೀಧಿಶರು ಅವರಿಂದ ಹೇಳಿಕೆ ಪಡೆಯಲಿದ್ದಾರೆ. ಒಂದು ವೇಳೆ ಮಠದಲ್ಲಿ ತಮಗೆ ಆರೋಪಿ […]

ಲೈಂಗಿಕ ದೌರ್ಜನ್ಯ ಆರೋಪ| ಮುರುಘಾ ಶರಣರಿಗೆ ಬಂಧನ ಭೀತಿ Read More »

ರಾಜ್ಯಪಾಲ ಗೆಹ್ಲೋಟ್ ಅವರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಎಡಿಸಿ(ಮಿಲಿಟರಿ) ಆಗಿ ಭಾರತೀಯ ವಾಯುಪಡೆಯ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ವಹಿಸಿಕೊಂಡಿದ್ದಾರೆ. ಆಗಸ್ಟ್ 18 ರಂದು ಸಂದೀಪ್ ಶರ್ಮಾ‌ ಎಡಿಸಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜಭವನದಲ್ಲಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಐಗುಲೆಟ್ ಅನ್ನು ತೊಡಿಸಿ ಶುಭ ಹಾರೈಸಿದರು. ರಾಜ್ಯಪಾಲರ ಭದ್ರತೆ, ಎಲ್ಲ ಚಲನವಲನ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಹೊಣೆಗಾರಿಕೆ ಸಂದೀಪ್‌ ಅವರದ್ದಾಗಿದೆ. ಸಂದೀಪ್‌ ಅವರು ರಾಜ್ಯಪಾಲರ ಎಡಿಸಿ(ಮಿಲಿಟರಿ) ಯಾಗಿ ಕಾರ್ಯಭಾರ

ರಾಜ್ಯಪಾಲ ಗೆಹ್ಲೋಟ್ ಅವರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ Read More »

ಇಂದು ಕಿಚ್ಚ ಸುದೀಪ್ ಜನ್ಮದಿನ, ಸಿಡಿಪಿ ಬಿಡುಗಡೆ ಮಾಡಿದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಸಿಡಿಪಿಯನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅನಾವರಣಗೊಳಿಸಿದ್ದಾರೆ. ಸುದೀಪ್ ಸೆಪ್ಟೆಂಬರ್ 2 ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನಲೆ ಅಭಿಮಾನಿಗಳಿಗಾಗಿ ವಿಶೇಷ ಸಿಡಿಪಿ ಬಿಡುಗಡೆ ಮಾಡಲಾಗಿದೆ. ಇದನ್ನು ಸೋಷಿಯಲ್ ಮೀಡಿಯಾದಲ್ಲಿ ಡಿಪಿಯಾಗಿ ಬಳಸಿಕೊಳ್ಳಬಹುದು. ಸೆಪ್ಟೆಂಬರ್ 2 ರಂದು ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ವಿಕ್ರಾಂತ್ ರೋಣ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಇದರ ಜೊತೆಗೆ ಹೊಸ ಸಿನಿಮಾ ಘೋಷಣೆಯಾಗುವುದು ಖಂಡಿತಾ ಎನ್ನಲಾಗಿದೆ.

ಇಂದು ಕಿಚ್ಚ ಸುದೀಪ್ ಜನ್ಮದಿನ, ಸಿಡಿಪಿ ಬಿಡುಗಡೆ ಮಾಡಿದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ Read More »

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ

ಸಮಗ್ರ ನ್ಯೂಸ್: ಸಪ್ಟೆಂಬರ್​ 2 ರಂದು ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರಿ ಸಮಾವೇಶಕ್ಕೆ ವಿಶಾಲ ಜರ್ಮನ್ ಪೆಂಡಾಲ್ ಅಳವಡಿಸಲು ಮತ್ತು ವೇದಿಕೆ ಸಹಿತ ಇಡೀ ಸಭಾಂಗಣ ಪೂರ್ತಿ ನೆಲದಿಂದ ಎತ್ತರದಲ್ಲಿ ಇರುವಂತೆ ಸಿದ್ಧತೆ ಆರಂಭವಾಗಿದೆ. ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ ಫ್ಲ್ಯಾಟ್‌ಫಾರಂ ರಚಿಸಲಾಗುತ್ತದೆ. ಇದರಿಂದಾಗಿ ಒಂದು ವೇಳೆ ಮಳೆ ಬಂದರೂ

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ Read More »

ಕಾರು ಹೊಂದಿದ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ – ಗೃಹಸಚಿವ ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್ : ಇನ್ನೂ ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಆನಂದಪುರಂನ ಮುರುಘಾ ಮಠದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈಗ 50 ಸಾವಿರ ಹಾಗೂ 1 ಲಕ್ಷಕ್ಕೂ ಹಳೆ ಕಾರುಗಳು ಸಿಗುತ್ತಿವೆ. ಗಾರೆ ಮಾಡುವವರು, ಮೀನು ಹಿಡಿಯುವವರೂ ಕಾರು ತೆಗೆದುಕೊಂಡು ಹೋಗುತ್ತಾರೆ. ಅಂತವರ ಕಾರ್ಡ್ ಸಹಿತ ರದ್ದಾಗಿರುವುದು ಸರಿಯಲ್ಲ ಎಂದರು. ಈ ವಿಷಯದ ಕುರಿತು ಶಾಸಕ ಎಚ್‌.ಹಾಲಪ್ಪ ಹರತಾಳು ಹಾಗೂ ನಾನು ಮುಖ್ಯಮಂತ್ರಿ ಬಳಿ

ಕಾರು ಹೊಂದಿದ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ – ಗೃಹಸಚಿವ ಆರಗ ಜ್ಞಾನೇಂದ್ರ Read More »

ಹಬ್ಬಕ್ಕೆ ಊರಿಗೆ ತೆರಳುವವರಿಗೆ ಬಿಗ್ ಶಾಕ್ ; ಖಾಸಗಿ ಬಸ್ ದರ ಹೆಚ್ಚಳ

ಬೆಂಗಳೂರು : ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಬಿಗ್ ಶಾಕ್, ಬೆಂಗಳೂರಿನಿಂದ ಹೋಗುವ ಖಾಸಗಿ ಬಸ್ ಗಳ ಟಿಕೆಟ್ ದರ ಹೆಚ್ಚಳವಾಗಿದೆ. ಹಬ್ಬಕ್ಕಾಗಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹೊರಟವರಿಗೆ ಖಾಸಗಿ ಬಸ್ ಗಳ ಟಿಕೆಟ್ ದರ ಮೂರು ಪಟ್ಟು ಹೆಚ್ಚಾಗಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್ ಸೌಲಭ್ಯ ಒದಗಿಸುತ್ತಿದ್ದ ಕೆಎಸ್‌ಆರ್ಟಿಸಿ ಈ ಬಾರಿ ವಿಶೇಷ ಬಸ್ ಗಳ ಸಂಖ್ಯೆಯನ್ನು ಕಡಿಮೆ ಮಾಡಿದೆ. ಈ ಹಿನ್ನೆಲೆ ಆಗಸ್ಟ್ 26 ರಿಂದಲೇ ಖಾಸಗಿ ಬಸ್‌ಗಳ

ಹಬ್ಬಕ್ಕೆ ಊರಿಗೆ ತೆರಳುವವರಿಗೆ ಬಿಗ್ ಶಾಕ್ ; ಖಾಸಗಿ ಬಸ್ ದರ ಹೆಚ್ಚಳ Read More »

ಕಡಬ: ಗುಡ್ಡದಲ್ಲಿ‌ ಗುಂಡಿ ಅಗೆಯುವ ವೇಳೆ ಪುರಾತನ ಕಾಲದ ಗುಹೆ ಪತ್ತೆ| ಸಂಶೋಧಕರರಿಂದ ಅಧ್ಯಯನ

ಸಮಗ್ರ ನ್ಯೂಸ್: ಗುಡ್ಡದಲ್ಲಿ ಗುಂಡಿ ತೆಗೆಯುವ ವೇಳೆ ಗುಹೆ ಪತ್ತೆಯಾಗಿ ಅದರಲ್ಲಿ ಪ್ರಾಚೀನ ಕಾಲದ ಮಣ್ಣಿನ ಪರಿಕರಗಳು ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕಲ್ಲೆಂಬಿ ಎಂಬಲ್ಲಿ ನಡೆದಿದೆ. ಎಡಮಂಗಲ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವವರ ಜಮೀನಿನಲ್ಲಿ ಈ ಪ್ರಾಚೀನ ಪರಿಕರಗಳು ಪತ್ತೆಯಾಗಿವೆ. ರಬ್ಬರ್ ತೋಟ ತೆರವು ಮಾಡಿ ಅಡಕೆ ತೋಟ ಮಾಡುವ ಉದ್ದೇಶದಿಂದ ಜೆಸಿಬಿ ಯಂತ್ರದ ಮೂಲಕ ಅಡಕೆ ಗುಂಡಿ ತೆಗೆಯುವಾಗ ಇವು ಕಾಣಸಿಕ್ಕಿವೆ. ಪ್ರಾಚೀನ ಪರಿಕರಗಳು ಪತ್ತೆಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ

ಕಡಬ: ಗುಡ್ಡದಲ್ಲಿ‌ ಗುಂಡಿ ಅಗೆಯುವ ವೇಳೆ ಪುರಾತನ ಕಾಲದ ಗುಹೆ ಪತ್ತೆ| ಸಂಶೋಧಕರರಿಂದ ಅಧ್ಯಯನ Read More »

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ; ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಪೋಲಿಸರ ವಶ

ಸಮಗ್ರ ನ್ಯೂಸ್ : ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಹನುಮಂತ ಅವರನ್ನು ಬಂಧಿಸಿದ್ದಾರೆ. 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿಯಾಗಿರುವ ರಚನಾ ಹನುಮಂತಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿದೆ. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ ಮೊದಲ ರ‍್ಯಾಂಕ್ ಪಡೆದಿದ್ದರು. ಅಕ್ರಮ ಪ್ರಕರಣ ತಿಳಿಯುತ್ತಿದ್ದಂತೆ ರಚನಾ ಮೂರು ತಿಂಗಳಿನಿಂದ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ; ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಪೋಲಿಸರ ವಶ Read More »

ಚಿನ್ನ ಪ್ರಿಯರಿಗೆ ಚಿನ್ನದಂತ ಸುದ್ದಿ ತಿಳಿಯಿರಿ ಇಂದಿನ ಚಿನ್ನ ಬೆಳ್ಳಿಯ ಬೆಲೆ 

ಭಾರತದಲ್ಲಿ ಸತತ 3 ದಿನಗಳಿಂದ ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇಂದು ಭಾರೀ ಕುಸಿತ ಕಂಡಿದೆ. ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಇಂದು ಬಂಗಾರದ ಬೆಲೆ ಬರೋಬ್ಬರಿ 380 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ ಇಂದು 600 ರೂ. ಕುಸಿತವಾಗಿದೆ.ಬೆಳ್ಳಿ ಬೆಲೆಯಲ್ಲಿ ಇಂದು 600 ರೂ. ಕುಸಿತವಾಗಿದೆ. 2 ದಿನಗಳಿಂದ 1 ಕೆಜಿ ಬೆಳ್ಳಿ ಬೆಲೆ 55,400 ರೂ. ಇದ್ದುದು ಇಂದು 54,800 ರೂ. ಆಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ

ಚಿನ್ನ ಪ್ರಿಯರಿಗೆ ಚಿನ್ನದಂತ ಸುದ್ದಿ ತಿಳಿಯಿರಿ ಇಂದಿನ ಚಿನ್ನ ಬೆಳ್ಳಿಯ ಬೆಲೆ  Read More »

ಕುಕ್ಕೆ: ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ – ಸಚಿವ ವಿ.ಸೋಮಣ್ಣ

ಸಮಗ್ರ ನ್ಯೂಸ್: ‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ವಸತಿ ಯೋಜನೆಯಡಿ 5 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶಕ್ಕೆ, 1 ಲಕ್ಷ ಮನೆಗಳನ್ನು ನಗರ ಪ್ರದೇಶಕ್ಕೆ ನೀಡಿದ್ದಾರೆ. 2.34 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಗ್ರಾಮೀಣ ಭಾಗದಲ್ಲಿ ಆರಂಭವಾಗಿದೆ’ ಎಂದು ವಸತಿ ಮತ್ತು ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಅವರು ಸುದ್ದಿಗಾರರ ಜತೆ ಮಾತನಾಡಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳೂ ಸೇರಿದಂತೆ ಒಟ್ಟು

ಕುಕ್ಕೆ: ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ – ಸಚಿವ ವಿ.ಸೋಮಣ್ಣ Read More »