ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಹಲವು ಪ್ರಯಾಣಿಕರಿಗೆ ಗಾಯ
ಮೂಡಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆಯೊಂದು ಇಲ್ಲಿನ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಗ್ಗೆ ನಡೆದಿದೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗಕ್ಕೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಪಿಯಾಗಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಹಲವು ಪ್ರಯಾಣಿಕರಿಗೆ ಗಾಯ Read More »