ಪ್ರೀತಿಸಿ ಮದುವೆಯಾದ ಗಂಡ ಎರಡೇ ವರ್ಷಕ್ಕೆ ಸಾವು| ಪತ್ನಿ, 20 ದಿನದ ಹಸುಗೂಸನ್ನು ತಿರಸ್ಕರಿಸಿದ ಕುಟುಂಬ! ಉಡುಪಿಯಲ್ಲೊಂದು ಕರುಣಾಜನಕ ಕಥೆ
ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾಗಿದ್ದಾರೆ ಎಂಬ ಕಾರಣಕ್ಕೆ ಹೃದಯಾಘಾತದಿಂದ ಸಾವನಪ್ಪಿದ ಯುವಕನ ಮೃತದೇಹ ಪಡೆಯಲು ಬಂದ ಸಂಬಂಧಿಕರು, ಈತನ ಬಾಣಂತಿ ಪತ್ನಿ ಹಾಗೂ 20 ದಿನದ ಮಗುವನ್ನು ತಿರಸ್ಕರಿಸಿ ತೆರಳಿದ ಅಮಾನವೀಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಉಡುಪಿಯಲ್ಲಿ ಮೆಕಾನಿಕ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಯ್ಯಪ್ಪ ಎನ್ನುವವರು ಎರಡು ವರ್ಷಗಳ ಹಿಂದೆ ಗಂಗಾವತಿ ಮೂಲದ ಯುವತಿಯನ್ನು ಪ್ರೀತಿಸಿದ್ದರು. ಅವರಿಬ್ಬರ ಮದುವೆಗೆ ಎರಡೂ ಕುಟುಂಬಸ್ಥರಿಂದಲೂ ತೀವ್ರ ವಿರೋಧವಿತ್ತು. ಮನೆಯವರ ವಿರೋಧದ ನಡುವೆಯೂ ಪ್ರೇಮಿಗಳು ಮದುವೆಯಾಗಿದ್ದರು. ಇವರಿಬ್ಬರ ಸಂಸಾರ ಚೆನ್ನಾಗಿಯೇ […]