Ad Widget .

ಕಡಿಮೆ ಅಂಕ ನೀಡಿದ್ದಕ್ಕೆ ಸಭೆ ನಡೆಸುವ ನೆಪವೊಡ್ಡಿ ಗುರುಗಳನ್ನೇ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ವಿದ್ಯಾರ್ಥಿ

ಸಮಗ್ರ ನ್ಯೂಸ್ ​:  ಜಾರ್ಖಂಡ್​ನ ವಿದ್ಯಾರ್ಥಿಗಳು ಮರಕ್ಕೆ ಕಟ್ಟಿ ಥಳಿಸಿದ ಅಮಾನವೀಯ ಘಟನೆ ನಡೆದಿದೆ.

Ad Widget . Ad Widget .

ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಅನುತೀರ್ಣ ಆದ ವಿದ್ಯಾರ್ಥಿಗಳು ಸಭೆ ನಡೆಸುವ ನೆಪದಲ್ಲಿ ಶಿಕ್ಷಕರನ್ನು ಕರೆದು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ.

Ad Widget . Ad Widget .

ಜಾರ್ಖಂಡ್​ನ ದುಮ್ಕಾದ ಹಳ್ಳಿಯೊಂದರ ಶಾಲಾ ವಿದ್ಯಾರ್ಥಿಗಳು ಈ ನೀಚ ಕೃತ್ಯ ಎಸಗಿದವರು. ತಮಗೆ ಶಿಕ್ಷಕರು ಕಡಿಮೆ ಅಂಕಗಳನ್ನು ನೀಡಿದರು ಎಂದು ಎಲ್ಲ ಶಿಕ್ಷಕರನ್ನು ಕರೆದು ಬಳಿಕ ಅವರನ್ನು ಮರಕ್ಕೆ ಕಟ್ಟಿಹಾಕಿದ್ದಾರೆ. ನಂತರ ಎಲ್ಲರ ಮೇಲೆ ಹಲ್ಲೆ ನಡೆಸಿದ್ದರಿಂದ ಗುರುಗಳು ಗಾಯಗೊಂಡಿದ್ದಾರೆ. ಬಳಿಕ ಅವರನ್ನು ಬಂಧನದಿಂದ ಮುಕ್ತ ಮಾಡಿದ್ದಾರೆ.

“ವಿದ್ಯಾರ್ಥಿಗಳು ಸಭೆ ನಡೆಸುವ ನೆಪದಲ್ಲಿ ನಮಗೆ ಕರೆ ಮಾಡಿದರು. ಬಳಿಕ ಜಮಾಯಿಸಿದ್ದ ಎಲ್ಲ ಮಕ್ಕಳು ಪರೀಕ್ಷೆಯಲ್ಲಿ ಪಾಸಾಗಿದ್ದೇವೆ. ಪ್ರಾಯೋಗಿಕ ಅಂಕಗಳನ್ನು ಕಡಿಮೆ ನೀಡಿದ್ದೇ ಇದಕ್ಕೆ ಕಾರಣ ಎಂದು ದೂರಿದರು. ಈ ಅಂಕಗಳನ್ನು ಶಾಲೆಯ ಮುಖ್ಯೋಪಾಧ್ಯಾಯರು ನೀಡಬೇಕಿತ್ತು. ಅವರು ಮಾರ್ಕ್ಸ್ ಅನ್ನು ಕೊಡದ ಕಾರಣ ಈ ರೀತಿ ಆಗಿದೆ. ಆದರೆ, ವಿದ್ಯಾರ್ಥಿಗಳು ನಮ್ಮನ್ನು ಥಳಿಸಿದರು ಎಂದು ಹಲ್ಲೆಗೊಳಗಾದ ಶಿಕ್ಷಕ ಕುಮಾರ್ ಸುಮನ್ ತಮ್ಮ ನೋವನ್ನು ವ್ಯಕ್ತಪಡಿಸಿದರು.

Leave a Comment

Your email address will not be published. Required fields are marked *