ಕರ್ನಾಟಕ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ| ರಾಜೀನಾಮೆ ನೀಡಿದ ಮಾಜಿ ಸಂಸದ ಮುದ್ದಹನುಮೇಗೌಡ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ಮಾಜಿ ಸಂಸದ ಮುದ್ದಹನುಮೇಗೌಡ ತಾವು ಪಕ್ಷ ತೊರೆಯುತ್ತಿರುವುದಾಗಿ ಘೋಷಿಸಿದ್ದಾರೆ.

Ad Widget ... ..

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿದ್ದು, ಆದರೆ ಯಾವ ಪಕ್ಷದಿಂದ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ. ಕ್ಷೇತ್ರದ ಜನತೆ ಜೊತೆ ಸಮಾಲೋಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

Ad Widget

ಕಳೆದ ಲೋಕಸಭಾ ಚುನಾವಣೆಯಲ್ಲಿ ಮುದ್ದಹನುಮೇಗೌಡ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ಹೊಂದಿದ್ದರೂ ಸಹ ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಏರ್ಪಟ್ಟು, ತುಮಕೂರು ಕ್ಷೇತ್ರವನ್ನು ಜೆಡಿಎಸ್‌ ಗೆ ಬಿಟ್ಟುಕೊಡಲಾಗಿತ್ತು. ಅಲ್ಲಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್‌ ವರಿಷ್ಟ ದೇವೇಗೌಡರು ಪರಾಭವಗೊಂಡಿದ್ದರು.

Leave a Comment

Your email address will not be published. Required fields are marked *