Ad Widget .

ಮಂಗಳೂರು: ಮೋದಿ ಭೇಟಿ ಸಂಪೂರ್ಣ ಸುರಕ್ಷಿತ – ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಮಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ್ಧಾರೆ.

Ad Widget . Ad Widget .

ಈ ಸಂದರ್ಭದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಪ್ರಧಾನಿಯವರ ಭದ್ರತೆಗೆ ಬೇಕಾಗಿರುವ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸರು, ವಿವಿಧ ಜಿಲ್ಲೆಗಳ ಪೊಲೀಸರು, ಎಎನ್‌ಎಫ್, ಕೆಎಸ್​ಆರ್​ಪಿ ಪೊಲೀಸರು ಸೇರಿದಂತೆ 3 ಸಾವಿರ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಡಿಜಿಪಿ, ಎಡಿಜಿಪಿ ಸೇರಿದಂತೆ 100 ಪೊಲೀಸ್ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

Ad Widget . Ad Widget .

ಗೃಹಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿ, ಭದ್ರತೆ ಪರಿಶೀಲನೆ ನಡೆಸಿದರು. ಎಡಿಜಿಪಿ ಅಲೋಕ್ ಕುಮಾರ್ ಅವರು ವೇದಿಕೆ ಸ್ಥಳದಲ್ಲಿ ಪೊಲೀಸರು ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬುದರ ಬಗ್ಗೆ ನಿರ್ದೇಶನ ನೀಡಿದರು.

Leave a Comment

Your email address will not be published. Required fields are marked *