ನರೇಂದ್ರ ಮೋದಿ ಮಂಗಳೂರು ಭೇಟಿ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

ಸಮಗ್ರ ನ್ಯೂಸ್: ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ, ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

Ad Widget ... ..

ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 2ರ ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿಯೂ ಮೋದಿ ಪಾಲ್ಗೊಳ್ಳಲಿದ್ದಾರೆ.

Ad Widget

ಈ ಹಿನ್ನಲೆಯಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ಸಂಚಾರ ನಡೆಸುವ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಜನರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸಹಕಾರ ನೀಡಬೇಕು ಎಂದು ಕೋರಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಭದ್ರತೆ ನೋಡಿಕೊಳ್ಳುವ ಎಸ್‌ಪಿಜಿ ಅಧಿಕಾರಿಗಳು ಈಗಾಗಲೇ ಮಂಗಳೂರಿಗೆ ಆಗಮಿಸಿ ಒಂದು ಸುತ್ತಿನ ಪರಿಶೀಲನೆ ಮುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ.

Leave a Comment

Your email address will not be published. Required fields are marked *