Ad Widget .

ಮಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನಲೆ| ಸಂಚಾರ ಮಾರ್ಗದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆದೇಶ‌ ಹೊರಡಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸುಗಮ ಸಂಚಾರ, ಭದ್ರತೆ ಹಾಗೂ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಮತ್ತು ಸಂಚಾರ ಸುವ್ಯವಸ್ಥೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2ರ ಬೆಳಿಗ್ಗೆ 6ರಿಂದ ಪ್ರಧಾನಿ ಕಾರ್ಯಕ್ರಮ ಮುಗಿಸಿ ನಿರ್ಗಮಿಸುವವರೆಗೂ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

Ad Widget . Ad Widget . Ad Widget .

ಪ್ರಧಾನಿ ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ನಿರ್ದಿಷ್ಟ ಸ್ಥಳಗಳಲ್ಲಿ ಪಾರ್ಕಿಂಗ್ ಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ನಿತ್ಯ ಸಂಚರಿಸುವ ವಾಹನಗಳ ಮಾರ್ಗಗಳನ್ನು ಅಂದು ಬದಲಾವಣೆ ಮಾಡಲಾಗಿದೆ.

ವಾಹನ ಸಂಚಾರ ನಿಷೇಧ ಎಲ್ಲೆಲ್ಲಿ ?

  • ಮಂಗಳೂರು ವಿಮಾನ ನಿಲ್ದಾಣದಿಂದ ಕಂಜಾರು – ಮರವೂರು – ಮರಕಡ – ಕಾವೂರು – ಬೊಂದೇಲ್ – ಪದವಿನಂಗಡಿ – ಯೆಯ್ಯಾಡಿ – ರಾಷ್ಟ್ರೀಯ ಹೆದ್ದಾರಿ 66 ರ ಕೆ.ಪಿ.ಟಿ. ಜಂಕ್ಷನ್‌ನಿಂದ – ಕೊಟ್ಟಾರ ಚೌಕಿ ಕೂಳೂರು – ಎನ್‌ಎಂಪಿಎವರೆಗೆ ಹಾದು ಹೋಗುವ ರಸ್ತೆಗಳ ಎರಡೂ ಬದಿಗಳಲ್ಲಿ ಎಲ್ಲಿ ರೀತಿಯ ವಾಹನಗಳ ನಿಲುಗಡೆಯನ್ನು ಬೆಳಿಗ್ಗೆ 6ರಿಂದ ಸಂಜೆ 6ರ ತನಕ ನಿಷೇಧಿಸಲಾಗಿದೆ.
  • ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದ ಮತ್ತು ಸುತ್ತಲಿನ 500 ಮೀಟರ್ ವ್ಯಾಪ್ತಿಯ ರಸ್ತೆಗಳಲ್ಲಿ ಬೆಳಿಗ್ಗೆ 6ರಿಂದ ಸಂಜೆ 5ರ ತನಕ ಎಲ್ಲ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  • ಬಂಗ್ರ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದ ಸಾರ್ವಜನಿಕ ಸಮಾವೇಶಕ್ಕೆ ಬರುವ ಅತಿ ಗಣ್ಯ ವ್ಯಕ್ತಿಗಳು, ಗಣ್ಯ ವ್ಯಕ್ತಿಗಳು, ಫಲಾನುಭವಿಗಳು ಮತ್ತು ಸಾರ್ವಜನಿಕರು ಉಪಯೋಗಿಸುವ ವಾಹನಗಳನ್ನು ನಿಗದಿತ ಪಾರ್ಕಿಂಗ್ ಸ್ಥಳಗಳಿಗೆ ಸಂಚರಿಸಲು ಮತ್ತು ತುರ್ತು ಸೇವೆಯ ವಾಹನಗಳು ಈ ನಿಷೇಧಿತ ರಸ್ತೆಗಳಲ್ಲಿ ಸಂಚರಿಸಲು ಅನುಮತಿ ನೀಡಲಾಗಿದೆ.

Leave a Comment

Your email address will not be published. Required fields are marked *