ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ಸಮಗ್ರ ನ್ಯೂಸ್: ಸ್ನೇಹಿತರಿಂದಲೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಬಗ್ಗೆ ಸದ್ಯ ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ದೀಪು ಹಾಗೂ ಅಖಿಲೇಶ್ ಎಂದು ಗುರುತಿಸಲಾಗಿದೆ.

Ad Widget ... ..

ಯುವತಿಗೆ ಕಂಠಪೂರ್ತಿ ಕುಡಿಸಿದ ಯುವಕರು ಆಕೆಯನ್ನು ಕರೆದುಕೊಂಡು ಹೋಗಿ ಹೆಚ್ ಎಎಲ್ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾರೆ.

Ad Widget

ಈಜೀಪುರ ಮುಖ್ಯ ರಸ್ತೆಯಿಂದ ಯುವತಿಯನ್ನು ಯುವಕರು ಕರೆದುಕೊಂಡು ಹೋಗಿದ್ದಾರೆ. ನಂತರ ಯುವತಿಯನು ಯುವಕರು ರೇಪ್ ಮಾಡಿದ್ದಾರೆ. ಅಲ್ಲದೆ ಅತ್ಯಾಚಾರದ ವಿಷಯ ಯಾರಿಗಾದ್ರು ತಿಳಿಸಿದರೆ ಕೊಲೆ ಮಾಡೋದಾಗಿ ಬೆದರಿಸಿದ್ದಾರೆ.

ಘಟನೆ ಬಳಿಕ ಸಂತ್ರಸ್ತ ಯುವತಿ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯ ವಿವೇಕ್ ನಗರ ಪೊಲೀಸರು ಇಬ್ಬರು ಆರೋಪಗಳನ್ನು ಬಂಧಿಸಿದ್ದಾರೆ.

Leave a Comment

Your email address will not be published. Required fields are marked *