Ad Widget .

ಹೊಸ ರೀತಿಯಲ್ಲಿ ತಮಿಳಿನಲ್ಲಿ ಕೆಜಿಎಫ್ ಸಿನಿಮಾ ಆರಂಭ

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಕೆಜಿಎಫ್2 ಬಳಿಕ ಕೆಜಿಎಫ್ 3 ಸಿನಿಮಾ ಬರುತ್ತಾ ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ. ಆದರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಸದ್ಯಕ್ಕೆ ಕೆಜಿಎಫ್ 3 ಇಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.

Ad Widget . Ad Widget .

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದಲ್ಲಿ ಕಾಲ್ಪನಿಕ ಕಥೆಗೆ ಹೆಚ್ಚು ಒತ್ತು ನೀಡಲಾಗಿತ್ತು. ಕೆಜಿಎಫ್ ಕಥೆಯನ್ನು ಅದು ಒಳಗೊಂಡಿರಲಿಲ್ಲ.

Ad Widget . Ad Widget .

ಹಾಗಾಗಿ ಕೆಜಿಎಫ್ ನಲ್ಲಿ ನಡೆದ ರಿಯಲ್ ಘಟನೆಯನ್ನು ಕೆಜಿಎಫ್ ಹೆಸರಿನ ಸಿನಿಮಾದಲ್ಲಿ ತೋರಿಸಲು ಹೊರಟಿದ್ದಾರೆ ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್. ಕೆಜಿಎಫ್ ನಲ್ಲಿ ರಿಯಲ್ ಆಗಿ ನಡೆದ ಸಂಘರ್ಷಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ.

ಹಾಗಾಗಿ ಇದೇ ಮೊದಲ ಬಾರಿಗೆ ಕೆಜಿಎಫ್ ಕುರಿತಾಗಿ ರಿಯಲ್ ಆಗಿ ಬರುತ್ತಿರುವ ಸಿನಿಮಾ ತಮಿಳಿನ ಕೆಜಿಎಫ್ ಸಿನಿಮಾವಾಗಿರಲಿದೆ.

ಕೆಜಿಎಫ್ ಸಿನಿಮಾಗೆ ಚಿಯಾನ್ ವಿಕ್ರಮ್ ನಾಯಕನಾಗಿ ಆಯ್ಕೆಯಾಗಿದ್ದು, ಇದೊಂದು ಒಳ್ಳೆಯ ಸಿನಿಮಾ ಆಗಲಿದೆ ಎಂದಿದ್ದಾರೆ ವಿಕ್ರಮ್.

ಆಸ್ಕರ್ ಪ್ರಶಸ್ತಿ ಸಲ್ಲಬೇಕಾದ ಸಿನಿಮಾ ಇದಾಗಲಿದೆ ಎಂದೂ ಅವರು ಹಾಡಿ ಹೊಗಳಿದ್ದಾರೆ. ಪಾ.ರಂಜಿತ್ ದೇಸಿಯ ಕಥೆಗಳನ್ನು ಸಿನಿಮಾ ಮಾಡಿದ ನಿರ್ದೇಶಕ. ಶೋಷಿತರ ನೋವುಗಳನ್ನು ದೃಶ್ಯಕ್ಕೆ ತಂದ ಹೆಗ್ಗಳಿಕೆ ಇವರದ್ದು. ಹಾಗಾಗಿ ಕೆಜಿಎಫ್ ಸಿನಿಮಾ ಹೊಸ ರೀತಿಯೊಂದಿಗೆ ಬರುವುದು ಗ್ಯಾರಂಟಿ.

Leave a Comment

Your email address will not be published. Required fields are marked *