ಬಂಟ್ವಾಳ: ಹೆಜ್ಜೇನು ದಾಳಿ ಬಾಲಕ ಮೃತ್ಯು

ಬಂಟ್ವಾಳ: ಹೆಜ್ಜೇನು ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ತಾಲೂಕಿನ ಕಳಾಯಿಯಲ್ಲಿ ಎಂಬಲ್ಲಿ ನಡೆದಿದೆ.

Ad Widget ... ..

ಮೃತ ಬಾಲಕನನ್ನು ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಎಂದು ಗುರುತಿಸಲಾಗಿದೆ.

Ad Widget

ಸೆ.1 ರ ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝಿನ್ ಮೇಲೆ ಹೆಜ್ಜೇ‌ನು ದಾಳಿ ನಡೆಸಿದ್ದು, ತೀವ್ರ ಅಸ್ವಸ್ಥಗೊಂಡ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *