ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ ದಂಪತಿ

ಬೆಂಗಳೂರು: ಧೃವಾ ಸರ್ಜಾ ಹಾಗೂ ಪ್ರೇರಣಾ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ. ತಾವು ಪೋಷಕರಾಗುತ್ತಿರುವ ವಿಚಾರವನ್ನು ಪತ್ನಿ ಪ್ರೇರಣಾ ಬೇಬಿ ಬಂಪ್ ಫೋಟೋ ಶೂಟ್ ಮೂಲಕ ಧೃವಾ ಸರ್ಜಾ ತಿಳಿಸಿದ್ದಾರೆ.

Ad Widget ... ..

ಕನ್ನಡ ಚಿತ್ರರಂಗದ ಸ್ಟಾರ್ ನಟ ಧೃವಾ ಸರ್ಜಾ ತಂದೆಯಾಗುತ್ತಿದ್ದಾರೆ. ಈ ಸಿಹಿ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

Ad Widget

ನಾವು ಜೀವನದ ಹಂತಕ್ಕೆ ಪ್ರವೇಶಿಸಿದ್ದೇವೆ. ಶೀಘ್ರದಲ್ಲಿ ಬರಲಿರುವ ಮಗುವನ್ನು ಆಶೀರ್ವದಿಸಿ ಎಂದು ಧೃವಾ ಸರ್ಜಾ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಸದ್ಯ ಈ ಬೇಬಿ ಬಂಪ್ ಫೋಟೋಶೂಟ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ನೆಚ್ಚಿನ ಜೋಡಿ ಫ್ಯಾನ್ಸ್ ಶುಭ ಹಾರೈಸಿದ್ದಾರೆ.

ವಿವಾಹವಾದ ಮೂರು ವರ್ಷದ ಬಳಿಕ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

Leave a Comment

Your email address will not be published. Required fields are marked *